ನವದೆಹಲಿ: ‘ಹೊಸ ಆದಾಯ ತೆರಿಗೆ ಮಸೂದೆಯನ್ನು ಲೋಕಸಭೆಯಲ್ಲಿ ಮುಂದಿನ ವಾರ ಮಂಡನೆ ಮಾಡುವ ಸಾಧ್ಯತೆ ಇದೆ’ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಮಂಡಿಸಿದ ಬಳಿಕ, ಮಸೂದೆಯನ್ನು ಸಂಸದೀಯ ಸ್ಥಾಯಿ ಸಮಿತಿ ಪರಿಶೀಲನೆಗೆ ಕಳುಹಿಸಲಾಗುವುದು ಎಂದರು.
ಸಂಸದೀಯ ಸಮಿತಿಯು ಶಿಫಾರಸು ಮಾಡಿದ ನಂತರ ಮಸೂದೆ ಮತ್ತೆ ಸಂಪುಟಕ್ಕೆ ಹೋಗುತ್ತದೆ. ಸಚಿವ ಸಂಪುಟದ ಒಪ್ಪಿಗೆ ಬಳಿಕ ಮತ್ತೆ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಮಸೂದೆಗೆ ಅನುಮೋದನೆ ನೀಡಿತ್ತು. ಈ ಮೂಲಕ ಆರು ದಶಕದಷ್ಟು ಹಳೆಯದಾದ ಆದಾಯ ತೆರಿಗೆ ಕಾಯ್ದೆಯ ಬದಲಾವಣೆಗೆ ಸರ್ಕಾರ ಮುಂದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.