ನವದೆಹಲಿ: ‘ದೇಶದಲ್ಲಿ ಮುಂದಿನ ಹತ್ತು ವರ್ಷಗಳಲ್ಲಿ ಸರ್ಕಾರದ ಅಡಿ ನೋಂದಣಿಯಾಗುವ ನವೋದ್ಯಮಗಳ ಸಂಖ್ಯೆ 10 ಲಕ್ಷ ದಾಟುವ ನಿರೀಕ್ಷೆಯಿದೆ’ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ತಿಳಿಸಿದ್ದಾರೆ.
ಹೂಡಿಕೆಗೆ ಸಂಬಂಧಿಸಿದಂತೆ ಮಂಗಳವಾರ ಇಸ್ರೇಲ್ ನಿಯೋಗದ ಜೊತೆ ಚರ್ಚಿಸಿದ ಬಳಿಕ ಮಾತನಾಡಿದ ಅವರು, ಸರ್ಕಾರವು ನವೋದ್ಯಮಿಗಳ ಬೆಳವಣಿಗೆಗೆ ಉತ್ತೇಜನ ನೀಡಲು ಹಲವು ಕ್ರಮಕೈಗೊಂಡಿದೆ. ಇದರಿಂದ ನವೋದ್ಯಮಗಳ ಸಂಖ್ಯೆ ಹೆಚ್ಚಳವಾಗಲಿದೆ ಎಂದು ಹೇಳಿದರು.
2016ರಲ್ಲಿ ಸರ್ಕಾರವು ನವೋದ್ಯಮಗಳಿಗೆ ಉತ್ತೇಜನ ನೀಡಲು ಸ್ಟಾರ್ಟ್ಅಪ್ ಇಂಡಿಯಾಕ್ಕೆ ಚಾಲನೆ ನೀಡಿತ್ತು. ಆ ವರ್ಷದಲ್ಲಿ ಕೈಗಾರಿಕಾ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯಡಿ (ಡಿಪಿಐಐಟಿ) 450 ನವೋದ್ಯಮಗಳು ನೋಂದಣಿಯಾಗಿದ್ದವು. ಸದ್ಯ ಅವುಗಳ ಸಂಖ್ಯೆ 1.57 ಲಕ್ಷಕ್ಕೆ ಮುಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.