ನವದೆಹಲಿ (ಪಿಟಿಐ): ಹಿಂದುಸ್ಥಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಸೆಪ್ಟೆಂಬರ್ ತ್ರೈಮಾಸಿಕದಲ್ಲಿಯೂ ನಷ್ಟ ಅನುಭವಿಸಿದೆ. ವೆಚ್ಚಗಳು ಹೆಚ್ಚಾಗಿದ್ದರೂ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಬೆಲೆ ಏರಿಕೆ ಮಾಡದೆ ಇದ್ದುದು ಕಂಪನಿಯ ನಷ್ಟಕ್ಕೆ ಕಾರಣ.
ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕಂಪನಿಯು ಒಟ್ಟು ₹ 2,475 ಕೋಟಿ ನಿವ್ವಳ ನಷ್ಟ ಕಂಡಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಲಾಗಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹ 1,918 ಕೋಟಿ ನಿವ್ವಳ ಲಾಭ ಗಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.