ADVERTISEMENT

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 14:37 IST
Last Updated 14 ಮಾರ್ಚ್ 2020, 14:37 IST
ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ ಠಾಕ್ರೆ ಪ್ರಶಸ್ತಿ ಸ್ವೀಕರಿಸಿದರು
ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ ಠಾಕ್ರೆ ಪ್ರಶಸ್ತಿ ಸ್ವೀಕರಿಸಿದರು   

ಹುಬ್ಬಳ್ಳಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ’ಉಡಾನ್‘ ಪ್ರಾದೇಶಿಕ ಸಂಪರ್ಕ ಯೋಜನೆ ಅಡಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಉತ್ತಮ ವಿಮಾನ ನಿಲ್ದಾಣ ಪ್ರಶಸ್ತಿ ನೀಡಿ ಗೌರವಿಸಿದೆ.

ಕೇಂದ್ರ ವಿಮಾನಯಾನ ಸಚಿವಾಲಯ ಮತ್ತು ಭಾರತೀಯ ವಾಣಿಜ್ಯೋದ್ಯಮ ಸಂಸ್ಥೆಯ ಸಹಯೋಗದಲ್ಲಿ ಹೈದರಾಬಾದ್‌ನ ಬೇಗಂಪೇಟೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ ಠಾಕ್ರೆ ಪ್ರಶಸ್ತಿ ಸ್ವೀಕರಿಸಿದರು.

ಉಡಾನ್ ಎರಡನೇ ಹಂತದ ಯೋಜನೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ನಾಲ್ಕು ವಿಮಾನಯಾಮ ಸಂಸ್ಥೆಗಳಿಂದ 9 ಮಾರ್ಗಗಳನ್ನು ನೀಡಲಾಗಿದೆ. ಈ ಹಿಂದೆ ನೀಡಲಾಗಿದ್ದ ಎಲ್ಲಾ 9 ಮಾರ್ಗಗಳನ್ನು ಈ ನಿಲ್ದಾಣ ಸಮರ್ಥವಾಗಿ ನಿರ್ವಹಿಸಿದೆ. ಪ್ರತಿವರ್ಷ ಉತ್ತಮ ಪ್ರಗತಿ ಹೊಂದುತ್ತಿದೆ. 2017ರಿಂದ 19ರ ಅವಧಿಯಲ್ಲಿ ವಿಮಾನ ಸಂಚಾರ ಬೆಳವಣಿಗೆಯು ಶೇ 500 ರಷ್ಟು ಹಾಗೂ ಪ್ರಯಾಣಿಕರ ಓಡಾಟವೂ ಶೇ 800 ರಷ್ಟು ವೃದ್ಧಿಯಾಗಿದೆ.

ADVERTISEMENT

2019–20ನೇ ಸಾಲಿನ ಜನವರಿ ಅಂತ್ಯದವರೆಗೆ 4.11 ಲಕ್ಷ ಜನರಿಗೆ ಸೇವೆ ನೀಡಲಾಗಿದೆ. ಈ ಆರ್ಥಿಕ ವರ್ಷಾಂತ್ಯಕ್ಕೆ 5 ಲಕ್ಷ ಜನರನ್ನು ತಲುಪುವ ನಿರೀಕ್ಷೆ ಇದೆ. ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿಯೂ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಮೋದ ಠಾಕ್ರೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.