
ಚೆನ್ನೈ: ತಮಿಳುನಾಡಿನ ಚೆನ್ನೈನಲ್ಲಿ ಸೋಮವಾರ ಮುಕ್ತಾಯವಾದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಒಟ್ಟು ₹6.64 ಲಕ್ಷ ಕೋಟಿ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ವಿವಿಧ ಕಂಪನಿಗಳ ಜೊತೆ ಒಪ್ಪಂದಕ್ಕೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಸರ್ಕಾರವು ಸಹಿ ಹಾಕಿದೆ.
ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ 29 ಲಕ್ಷಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ಸರ್ಕಾರ ಹೇಳಿದೆ.
ಹೈಡ್ರೋಜನ್ ಸಂಪನ್ಮೂಲ ಕೇಂದ್ರ ಸ್ಥಾಪನೆ ಸೇರಿದಂತೆ ವಿವಿಧ ಉದ್ದೇಶಗಳಿಗೆ ಹುಂಡೈ ಕಂಪನಿಯು ₹6,180 ಕೋಟಿ ಹೂಡಿಕೆ ಮಾಡಲಿದೆ.
ರಾಯಲ್ ಎನ್‌ಫೀಲ್ಡ್‌ನಿಂದ ಹೂಡಿಕೆ: ಮುಂದಿನ ಎಂಟು ವರ್ಷಗಳಲ್ಲಿ ಹೊಸ ಉತ್ಪನ್ನಗಳ ತಯಾರಿಕೆಗೆ ರಾಯಲ್ ಎನ್‌ಫೀಲ್ಡ್ ಕಂಪನಿಯು ₹3 ಸಾವಿರ ಕೋಟಿ ಹೂಡಿಕೆ ಮಾಡಲು ಒಪ್ಪಂದಕ್ಕೆ ಸಹಿ ಹಾಕಿದೆ.
‘ಮುಂದಿನ 20 ವರ್ಷಗಳಲ್ಲಿ ತಮಿಳುನಾಡಿನ ಅಭಿವೃದ್ಧಿಗೆ ಈ ಹೂಡಿಕೆಯು ನೆರವಾಗಲಿದೆ’ ಎಂದು ಮುಖ್ಯಮಂತ್ರಿ ಸ್ಟಾಲಿನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.