ADVERTISEMENT

ಹುಂಡೈ ಲಾಭ ಇಳಿಕೆ

ಪಿಟಿಐ
Published 16 ಮೇ 2025, 13:45 IST
Last Updated 16 ಮೇ 2025, 13:45 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: 2024–25ನೇ ಆರ್ಥಿಕ ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ಹುಂಡೈ ಮೋಟರ್‌ ಇಂಡಿಯಾ ಕಂಪನಿಯ (ಎಚ್‌ಎಂಐಎಲ್‌) ತೆರಿಗೆ ನಂತರದ ಲಾಭದಲ್ಲಿ ಶೇ 4ರಷ್ಟು ಇಳಿಕೆಯಾಗಿದೆ.

ಮಾರ್ಚ್‌ ತ್ರೈಮಾಸಿಕದಲ್ಲಿ ₹1,614 ಕೋಟಿ ಲಾಭ ಗಳಿಸಿದೆ. 2023–24ನೇ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹1,677 ಕೋಟಿ ಲಾಭ ಗಳಿಸಿತ್ತು.

ದೇಶೀಯ ಮಾರುಕಟ್ಟೆಯಲ್ಲಿ ವಾಹನಗಳ ಮಾರಾಟ ಇಳಿಕೆಯಾಗಿದೆ. ಹೀಗಾಗಿ ಲಾಭದ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಕಂಪನಿಯು ಶುಕ್ರವಾರ ಷೇರುಪೇಟೆಗೆ ತಿಳಿಸಿದೆ.

ADVERTISEMENT

ಮಾರ್ಚ್‌ ತ್ರೈಮಾಸಿಕದಲ್ಲಿ ಒಟ್ಟು ವರಮಾನ ₹17,940 ಕೋಟಿ ಆಗಿದೆ. ಪ್ರತಿ ಷೇರಿಗೆ ₹21 ಲಾಭಾಂಶ ನೀಡಲು ಕಂಪನಿಯ ಆಡಳಿತ ಮಂಡಳಿಯು ಶಿಫಾರಸು ಮಾಡಿದೆ. 

2025–26ರಿಂದ 2029–30ನೇ ಆರ್ಥಿಕ ವರ್ಷದ ಅವಧಿಯಲ್ಲಿ ಆರು ವಿದ್ಯುತ್‌ಚಾಲಿತ ವಾಹನ ಸೇರಿ 26 ಹೊಸ ಮಾದರಿಯ ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಕಂಪನಿಯು ನಿರ್ಧರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.