ADVERTISEMENT

ಕಾರು ಖರೀದಿಗೆ ಆನ್‌ಲೈನ್‌ನತ್ತ ಗ್ರಾಹಕರು: ಹುಂಡೈ

ಪಿಟಿಐ
Published 6 ಜುಲೈ 2020, 12:02 IST
Last Updated 6 ಜುಲೈ 2020, 12:02 IST
ಹುಂಡೈ
ಹುಂಡೈ   

ನವದೆಹಲಿ: ಕಾರ್‌ಗಳನ್ನು ಖರೀದಿಸುವ ಬಗ್ಗೆ ಆನ್‌ಲೈನ್‌ನಲ್ಲಿ ಮಾಹಿತಿ ಪಡೆಯುವವರ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ ಎಂದುಹುಂಡೈ ಮೋಟರ್‌ ಇಂಡಿಯಾ ಕಂಪನಿಯು ತಿಳಿಸಿದೆ.

‘ಕ್ಲಿಕ್‌ ಟು ಬೈ’ ಆನ್‌ಲೈನ್‌ ಸೌಲಭ್ಯವನ್ನು ಮಾರ್ಚ್‌ನಲ್ಲಿ ಆರಂಭಿಸಿದ್ದು, ಇದುವರೆಗೆ 15 ಲಕ್ಷ ಜನರು ಜಾಲತಾಣಕ್ಕೆ ಭೇಟಿ ನೀಡಿದ್ದು, 20 ಸಾವಿರಕ್ಕೂ ಹೆಚ್ಚು ಜನರು ವಿವರಗಳನ್ನು ಕೇಳಿದ್ದಾರೆ ಎಂದು ಮಾಹಿತಿ ನೀಡಿದೆ.

ಕೋವಿಡ್‌ ಸಂದರ್ಭದಲ್ಲಿ ಜನರು ಷೋರೂಂಗಳಿಗೆ ಭೇಟಿ ನೀಡದೇ ಸಂಪೂರ್ಣವಾಗಿ ಆನ್‌ಲೈನ್‌ ಮೂಲಕವೇ ಕಾರ್‌ ಖರೀದಿಸಲು ಅನುಕೂಲ ಆಗುವಂತೆ ಈ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕಂಪನಿ ತಿಳಿಸಿದೆ.

ADVERTISEMENT

ಬ್ಯಾಂಕ್‌ ಶಾಖೆಗಳಿಗೆ ಭೇಟಿ ನೀಡದೇವಾಹನ ಸಾಲ ಪಡೆಯಲು ಅನುಕೂಲ ಆಗುವಂತೆ ಎಚ್‌ಡಿಎಫ್‌ಸಿ ಮತ್ತು ಐಸಿಐಸಿಐ ಬ್ಯಾಂಕ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದೂ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.