
ನವದೆಹಲಿ: 2030ರ ವೇಳೆಗೆ ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ ಮತ್ತು ಕ್ವಾಂಟಮ್ ಕಂಪ್ಯೂಟಿಂಗ್ ಸೇರಿದಂತೆ ವಿವಿಧ ತಂತ್ರಜ್ಞಾನದ ಕೌಶಲ ತರಬೇತಿಯನ್ನು ದೇಶದ 50 ಲಕ್ಷ ಯುವಜನರಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಅಮೆರಿಕದ ತಂತ್ರಜ್ಞಾನ ಸಂಸ್ಥೆ ಐಬಿಎಂ ಶುಕ್ರವಾರ ಹೇಳಿದೆ.
‘ಐಬಿಎಂ ಸ್ಕಿಲ್ಸ್‌ಬಿಲ್ಡ್’ ಕಾರ್ಯಕ್ರಮವು, ಭವಿಷ್ಯಕ್ಕೆ ಸಿದ್ಧವಾದ ಸಿಬ್ಬಂದಿಯನ್ನು ಸೃಷ್ಟಿಸುವ ಗುರಿ ಹೊಂದಿದೆ. ವಿದ್ಯಾರ್ಥಿಗಳು ಮತ್ತು ಹಿರಿಯ ವಯಸ್ಕರಿಗೆ ಡಿಜಿಟಲ್ ಕೌಶಲ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದೆ.
ಈ ಕಾರ್ಯಕ್ರಮದ ಅಂಗವಾಗಿ ಐಬಿಎಂ, ಶಾಲೆಗಳು, ವಿಶ್ವವಿದ್ಯಾಲಯಗಳಲ್ಲಿ ಈ ತರಬೇತಿಯನ್ನು ನೀಡಲಾಗುವುದು. ಕಂಪನಿಯು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಜೊತೆ ಪಾಲುದಾರಿಕೆ ಮಾಡಿಕೊಂಡು ವಿವಿಧ ಕಾರ್ಯಕ್ರಮ ನಡೆಸಲಿದೆ ಎಂದು ತಿಳಿಸಿದೆ.
2030ರ ವೇಳೆಗೆ ವಿಶ್ವದಾದ್ಯಂತ 3 ಕೋಟಿ ಜನರಿಗೆ ತರಬೇತಿ ನೀಡುವ ಗುರಿಯನ್ನು ಐಬಿಎಂ ಹೊಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.