ADVERTISEMENT

8 ಉತ್ಕೃಷ್ಟತಾ ಕೇಂದ್ರ ಸ್ಥಾಪನೆ: ಐಸಿಎಐ

ಪಿಟಿಐ
Published 23 ಡಿಸೆಂಬರ್ 2024, 13:33 IST
Last Updated 23 ಡಿಸೆಂಬರ್ 2024, 13:33 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯು (ಐಸಿಎಐ) ಮುಂದಿನ ಮೂರು ವರ್ಷಗಳಲ್ಲಿ ಹೊಸದಾಗಿ ಎಂಟು ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷ ರಂಜೀತ್‌ ಕುಮಾರ್‌ ಅಗರ್ವಾಲ್‌ ತಿಳಿಸಿದ್ದಾರೆ.

ಈ ಕೇಂದ್ರಗಳ ಸ್ಥಾಪನೆ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತವನ್ನು ಲೆಕ್ಕಪತ್ರ ನಿರ್ವಹಣೆ ಮತ್ತು ಲೆಕ್ಕ ಪರಿಶೋಧನೆಯ ಹಬ್‌ ಆಗಿ ರೂಪಿಸಲಾಗುವುದು. ಹಣಕಾಸು ಹಾಗೂ ತೆರಿಗೆ ಸಾಕ್ಷರತೆ ಬಗ್ಗೆ ಅರಿವು ಮೂಡಿಸಲು ಈ ಕೇಂದ್ರಗಳು ನೆರವಾಗಲಿವೆ ಎಂದು ಹೇಳಿದ್ದಾರೆ. 

ಈಗಾಗಲೇ, ಹೈದರಾಬಾದ್‌ ಮತ್ತು ಜೈಪುರದಲ್ಲಿ ಉತ್ಕೃಷ್ಟತಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಜನವರಿ ವೇಳೆಗೆ ಕೋಲ್ಕತ್ತದಲ್ಲಿ ಮತ್ತೊಂದು ಕೇಂದ್ರ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದ್ದಾರೆ.

ADVERTISEMENT

ಅಂತರರಾಷ್ಟ್ರೀಯ ಹಣಕಾಸು ಸೇವೆಗಳ ಕೇಂದ್ರದ (ಐಎಫ್‌ಎಸ್‌ಸಿ) ಪರಿಕಲ್ಪನೆಗೆ ಉತ್ತೇಜನ ನೀಡಲು ಸಂಸ್ಥೆಯು ಕಾರ್ಯತತ್ಪರವಾಗಿದೆ ಎಂದು ತಿಳಿಸಿದ್ದಾರೆ.

ಜನವರಿಯಲ್ಲಿ ಜಾಗತಿಕ ಲೆಕ್ಕ ಪರಿಶೋಧಕರ ಸಮ್ಮೇಳನವನ್ನು (ಡಬ್ಲ್ಯುಒಎಫ್‌ಎ) ಸಂಘಟಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.