ADVERTISEMENT

ಐಸಿಐಸಿಐ ಬ್ಯಾಂಕ್‌ ಲಾಭ ಏರಿಕೆ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2025, 14:56 IST
Last Updated 19 ಏಪ್ರಿಲ್ 2025, 14:56 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: 2024–25ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ದೇಶದ ಖಾಸಗಿ ವಲಯದ ಐಸಿಐಸಿಐ ಬ್ಯಾಂಕ್‌ನ ನಿವ್ವಳ ಲಾಭದಲ್ಲಿ ಶೇ 15.7ರಷ್ಟು ಏರಿಕೆಯಾಗಿದೆ. 

ಮಾರ್ಚ್‌ ತ್ರೈಮಾಸಿಕದಲ್ಲಿ ಒಟ್ಟು ₹13,502 ಕೋಟಿ ಲಾಭ ಗಳಿಸಲಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ಬಡ್ಡಿ ವರಮಾನದಿಂದ ₹21,193 ಕೋಟಿ ಹಾಗೂ ಬಡ್ಡಿಯೇತರ ವರಮಾನದಿಂದ ₹7,021 ಕೋಟಿ ಗಳಿಸಲಾಗಿದೆ. ಬ್ಯಾಂಕ್‌ನ ವಸೂಲಾಗದ ಸಾಲದ ಸರಾಸರಿ ಪ್ರಮಾಣವು ಶೇ 1.96ರಿಂದ ಶೇ 1.67ಕ್ಕೆ ತಗ್ಗಿದೆ ಎಂದು ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.