ಮುಂಬೈ: ಐಸಿಐಸಿಐ ಬ್ಯಾಂಕ್ನ ನಿವ್ವಳ ಲಾಭವು ಜೂನ್ ತ್ರೈಮಾಸಿಕದಲ್ಲಿ ಶೇ 52ರಷ್ಟು ಹೆಚ್ಚಾಗಿದ್ದು ₹ 4,747 ಕೋಟಿಗೆ ತಲುಪಿದೆ.
ಬ್ಯಾಂಕ್ನ ಒಟ್ಟಾರೆ ವರಮಾನವು ₹ 26,067 ಕೋಟಿಗಳಿಂದ ₹ 24,379 ಕೋಟಿಗಳಿಗೆ ಇಳಿಕೆ ಆಗಿದೆ. ಹಿಂದಿನ ಹಣಕಾಸು ವರ್ಷದ ಜೂನ್ ತ್ರೈಮಾಸಿಕ್ಕೆ ಹೋಲಿಸಿದರೆ, ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತವು ₹ 2,852 ಕೋಟಿಗಳಿಗೆ ಇಳಿಕೆ ಕಂಡಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 7,594 ಕೋಟಿ ತೆಗೆದಿರಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.