ADVERTISEMENT

ಐಸಿಐಸಿಐ ಲಾಭ ಇಳಿಕೆ, ಎಚ್‌ಡಿಎಫ್‌ಸಿ ಏರಿಕೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 13:45 IST
Last Updated 17 ಜನವರಿ 2026, 13:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಖಾಸಗಿ ವಲಯದ ಎರಡನೆಯ ಅತಿದೊಡ್ಡ ಬ್ಯಾಂಕ್‌ ಆಗಿರುವ ಐಸಿಐಸಿಐ ಬ್ಯಾಂಕ್‌ನ ಡಿಸೆಂಬರ್ ತ್ರೈಮಾಸಿಕದ ಫಲಿತಾಂಶವು ಶೇ 2.68ರಷ್ಟು ಕಡಿಮೆ ಆಗಿ ₹12,537 ಕೋಟಿಗೆ ತಲುಪಿದೆ.

ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಐಸಿಐಸಿಐ ಬ್ಯಾಂಕ್‌ ₹12,883 ಕೋಟಿ ಲಾಭ ಗಳಿಸಿತ್ತು. ಈ ವರ್ಷದ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಬ್ಯಾಂಕ್‌ನ ಲಾಭ ₹13,537 ಕೋಟಿ ಆಗಿತ್ತು.

ಬ್ಯಾಂಕ್‌ನ ನಿವ್ವಳ ಬಡ್ಡಿ ವರಮಾನವು ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಕೆ ಮಾಡಿದರೆ ಶೇ 7.7ರಷ್ಟು ಹೆಚ್ಚಳ ಕಂಡಿದ್ದು ₹21,932 ಕೋಟಿ ಆಗಿದೆ. ಬ್ಯಾಂಕ್‌ನ ಸಾಲ ನೀಡಿಕೆ ಪ್ರಮಾಣವು ಶೇ 11.5ರಷ್ಟು ಹೆಚ್ಚಾಗಿದೆ.

ADVERTISEMENT

ಹೊಸ ಕಾರ್ಮಿಕ ಸಂಹಿತೆಗಳ ಜಾರಿಗಾಗಿ ಬ್ಯಾಂಕ್‌ ₹145 ಕೋಟಿ ತೆಗೆದಿರಿಸಿದೆ.

ಎಚ್‌ಡಿಎಫ್‌ಸಿ ಬ್ಯಾಂಕ್‌ ಲಾಭ ಏರಿಕೆ

ಎಚ್‌ಡಿಎಫ್‌ಸಿ ಬ್ಯಾಂಕ್‌ನ ಡಿಸೆಂಬರ್‌ ತ್ರೈಮಾಸಿಕದ ಲಾಭವು ಶೇ 12.17ರಷ್ಟು ಹೆಚ್ಚಳ ಕಂಡಿದ್ದು ₹19,807 ಕೋಟಿಗೆ ತಲುಪಿದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಬ್ಯಾಂಕ್‌ ₹17,657 ಕೋಟಿ ಲಾಭ ಕಂಡಿತ್ತು. ಈ ವರ್ಷದ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಬ್ಯಾಂಕ್‌ ₹19,611 ಕೋಟಿ ಲಾಭ ಗಳಿಸಿದೆ.

ಬ್ಯಾಂಕ್‌ನ ನಿವ್ವಳ ಬಡ್ಡಿ ವರಮಾನವು ಶೇ 6.4ರಷ್ಟು ಹೆಚ್ಚಳವಾಗಿ ₹32,600 ಕೋಟಿಗೆ ತಲುಪಿದೆ. ಬಡ್ಡಿಯೇತರ ವರಮಾನವು ₹13,250 ಕೋಟಿ ಆಗಿದೆ ಎಂದು ಎಚ್‌ಡಿಎಫ್‌ಸಿ ಬ್ಯಾಂಕ್‌ ಷೇರುಪೇಟೆಗೆ ಮಾಹಿತಿ ನೀಡಿದೆ.

ಕಾರ್ಮಿಕ ಸಂಹಿತೆಗಳ ಅನುಷ್ಠಾನದ ಕಾರಣದಿಂದಾಗಿ ಬ್ಯಾಂಕ್‌ ಈ ತ್ರೈಮಾಸಿಕದಲ್ಲಿ ಹೆಚ್ಚುವರಿಯಾಗಿ ₹800 ಕೋಟಿ ವೆಚ್ಚ ಮಾಡಬೇಕಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.