
ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ದೇಶದ ಒಟ್ಟು ಆಂತರಿಕ ಉತ್ಪನ್ನ (ಜಿಡಿಪಿ) ಶೇ 7ರಷ್ಟಾಗಲಿದೆ ಎಂದು ರೇಟಿಂಗ್ ಸಂಸ್ಥೆ ಐಸಿಆರ್‌ಎ ಅಂದಾಜಿಸಿದೆ. ಜೂನ್ ತ್ರೈಮಾಸಿಕದಲ್ಲಿ ಜಿಡಿಪಿ ಪ್ರಗತಿ ಶೇ 7.8ರಷ್ಟಾಗಿತ್ತು.
ಸೇವಾ ವಲಯ ಮತ್ತು ಕೃಷಿ ವಲಯದ ಚಟುವಟಿಕೆ ಸೆಪ‍್ಟೆಂಬರ್ ತ್ರೈಮಾಸಿಕದಲ್ಲಿ ನಿರೀಕ್ಷಿಸಿದ ಪ್ರಮಾಣದಲ್ಲಿ ಪ್ರಗತಿ ಕಂಡಿಲ್ಲ. ಆದರೆ, ತಯಾರಿಕಾ ಮತ್ತು ನಿರ್ಮಾಣ ವಲಯದಲ್ಲಿನ ಚಟುವಟಿಕೆ ಹೆಚ್ಚಳದಿಂದ ಕೈಗಾರಿಕಾ ಪ್ರಗತಿ ಸದೃಢವಾಗಿದೆ. ಇದು ದೇಶದ ಆರ್ಥಿಕ ಚಟುವಟಿಕೆಯ ಮೇಲೆ ಪರಿಣಾಮ ಬೀರಲಿದೆ ಎಂದು ಮಂಗಳವಾರ ಹೇಳಿದೆ.
2024–25ರ ಆರ್ಥಿಕ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಜಿಡಿಪಿ ಶೇ 5.6ರಷ್ಟಿತ್ತು. ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಸೆಪ್ಟೆಂಬರ್ ತ್ರೈಮಾಸಿಕದ ಜಿಡಿಪಿ ಬೆಳವಣಿಗೆಯ ದತ್ತಾಂಶವನ್ನು ನವೆಂಬರ್ 28ರಂದು ಪ್ರಕಟಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.