ADVERTISEMENT

ಐಡಿಬಿಐ ಬ್ಯಾಂಕ್‌ ಲಾಭ ಶೇ 46ರಷ್ಟು ಏರಿಕೆ

ಪಿಟಿಐ
Published 21 ಅಕ್ಟೋಬರ್ 2022, 12:40 IST
Last Updated 21 ಅಕ್ಟೋಬರ್ 2022, 12:40 IST
   

ನವದೆಹಲಿ: ಐಡಿಬಿಐ ಬ್ಯಾಂಕ್‌ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹ 828 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದಲ್ಲಿ ₹ 567 ಕೋಟಿ ನಿವ್ವಳ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಶೇ 46ರಷ್ಟು ಹೆಚ್ಚಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ಬ್ಯಾಂಕ್‌ನ ವರಮಾನ ₹ 5,129 ಕೋಟಿಯಿಂದ ₹6,065 ಕೋಟಿಗೆ ಏರಿಕೆ ಆಗಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.