ಗೀತಾ ಗೋಪಿನಾಥ್
ರಾಯಿಟರ್ಸ್ ಚಿತ್ರ
ಟೊಕಿಯೊ: ‘ಜಗತ್ತಿನ ಹಲವು ರಾಷ್ಟ್ರಗಳ ಮೇಲೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿರುವ ಹೆಚ್ಚಿನ ಶುಲ್ಕದ ಪರಿಣಾಮಗಳನ್ನು ನಿಖರವಾಗಿ ಹೇಳಲು ಇನ್ನಷ್ಟು ಕಾಲ ಅಗತ್ಯ’ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ ಮೊದಲ ಉಪ ವ್ಯವಸ್ಥಾಪಕ ನಿರ್ದೇಶಕಿ ಗೀತಾ ಗೋಪಿನಾಥ್ ತಿಳಿಸಿದ್ದಾರೆ.
‘ಎಲ್ಲಾ ರಾಷ್ಟ್ರಗಳು ಪರಸ್ಪರ ಹಿತಕ್ಕಾಗಿ ಜತೆಗೂಡಿ ಕೆಲಸ ಮಾಡುವ ಅಗತ್ಯವಿದೆ. ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಂಡು ಅಂತರರಾಷ್ಟ್ರೀಯ ವ್ಯಾಪಾರಕ್ಕೆ ಮುಕ್ತ ವಾತಾವರಣ ಕಲ್ಪಿಸುವುದು ಅತ್ಯಗತ್ಯ’ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಜಪಾನ್ ಒಳಗೊಂಡಂತೆ ಕೆಲ ರಾಷ್ಟ್ರಗಳ ಉತ್ಪನ್ನಗಳ ಮೇಲೆ ಹೆಚ್ಚುವರಿ ಶುಲ್ಕ ವಿಧಿಸಲು ಮುಂದಾಗಿರುವುದರಿಂದ ಜಾಗತಿಕ ವ್ಯಾಪಾರ ಮೇಲಾಗುವ ಪರಿಣಾಮಗಳ ಕುರಿತು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.