ADVERTISEMENT

ಐ.ಟಿಯಿಂದ ಪಿಎಂಜಿಕೆಎವೈ ಫಲಾನುಭವಿಗಳ ಮಾಹಿತಿ ಹಂಚಿಕೆ

ಪಿಟಿಐ
Published 5 ಫೆಬ್ರುವರಿ 2025, 15:51 IST
Last Updated 5 ಫೆಬ್ರುವರಿ 2025, 15:51 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಕೆಲವು ಆದಾಯ ತೆರಿಗೆ ಪಾವತಿದಾರರು ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಡಿ (ಪಿಎಂಜಿಕೆಎವೈ) ಸೌಲಭ್ಯ ಪಡೆದಿದ್ದಾರೆ. ಅಂತಹವರ ಮಾಹಿತಿಯನ್ನು ಕೇಂದ್ರ ಆಹಾರ ಸಚಿವಾಲಯಕ್ಕೆ ಸಲ್ಲಿಸಲಾಗುವುದು ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ತಿಳಿಸಿದೆ.

ಈ ಯೋಜನೆಯಡಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸದ ಬಡವರಿಗೆ ಸೌಲಭ್ಯ ಕಲ್ಪಿಸಲಾಗುತ್ತದೆ. 2024–25ನೇ ಸಾಲಿನ ಬಜೆಟ್‌ನಲ್ಲಿ ಸರ್ಕಾರವು ಯೋಜನೆಗೆ ₹1.97 ಲಕ್ಷ ಕೋಟಿ ಅನುದಾನ ನಿಗದಿಪಡಿಸಿದೆ. 2025–26ನೇ ಸಾಲಿನಲ್ಲಿ ₹2.03 ಲಕ್ಷ ಕೋಟಿ ಮೀಸಲಿಟ್ಟಿದೆ.

ಅರ್ಹ ಫಲಾನುಭವಿಗಳಿಗೆ ಯೋಜನೆಯಡಿ ಉಚಿತವಾಗಿ ಆಹಾರ ಧಾನ್ಯ ವಿತರಿಸಲಾಗುತ್ತದೆ. ಆದರೆ, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವವರು ಕೂಡ ಇದರ ಸೌಲಭ್ಯ ಪಡೆದಿದ್ದಾರೆ. ಅಂತಹ ಅನರ್ಹ ಫಲಾನುಭವಿಗಳ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಸಿಬಿಡಿಟಿ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.