ADVERTISEMENT

ಡಿಸೆಂಬರ್‌ ಅಂತ್ಯಕ್ಕೆ ಹೊಸ ಐ.ಟಿ. ನಿಯಮ

ಪಿಟಿಐ
Published 25 ಆಗಸ್ಟ್ 2025, 15:14 IST
Last Updated 25 ಆಗಸ್ಟ್ 2025, 15:14 IST
ಆದಾಯ ತೆರಿಗೆ ಇಲಾಖೆ
ಆದಾಯ ತೆರಿಗೆ ಇಲಾಖೆ   

ನವದೆಹಲಿ: ಹೊಸ ಆದಾಯ ತೆರಿಗೆ ಕಾಯ್ದೆಯ ಅನುಷ್ಠಾನಕ್ಕೆ ಅಗತ್ಯವಿರುವ ನಿಯಮಗಳನ್ನು ಡಿಸೆಂಬರ್‌ಗೆ ಮೊದಲು ಅಧಿಸೂಚನೆಯಲ್ಲಿ ಪ್ರಕಟಿಸುವ ಗುರಿ ಇದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.

ಸರಳೀಕರಿಸಿದ ಆದಾಯ ತೆರಿಗೆ ವಿವರ ಸಲ್ಲಿಕೆ ನಮೂನೆಗಳನ್ನು ಸಿದ್ಧಪಡಿಸುವ ಕೆಲಸದಲ್ಲಿ ಇಲಾಖೆ ತೊಡಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಹೊಸ ಕಾಯ್ದೆ ಬಗ್ಗೆ ಇಲಾಖೆಯು ವಿವರಣೆಗಳನ್ನು ಪ್ರಶ್ನೋತ್ತರದ ಮಾದರಿಯಲ್ಲಿ ನೀಡಲಿದೆ ಎಂದು ಕೇಂದ್ರ ನೇರ ತೆರಿಗೆಗಳ ಮಂಡಳಿಯ (ಸಿಬಿಡಿಟಿ) ಸದಸ್ಯ (ಶಾಸನ) ಆರ್‌.ಎನ್. ಪರ್ಬತ್ ಅವರು ತಿಳಿಸಿದ್ದಾರೆ.

ADVERTISEMENT

ಹೊಸ ಕಾಯ್ದೆಯನ್ನು ಅರ್ಥ ಮಾಡಿಕೊಂಡು, ಅದನ್ನು ಅನುಷ್ಠಾನಕ್ಕೆ ತರಲು ಅಧಿಕಾರಿಗಳಿಗೆ ಸಾಧ್ಯವಾಗಬೇಕು ಎಂಬ ಉದ್ದೇಶದಿಂದ ಅವರ ಸಾಮರ್ಥ್ಯ ಹೆಚ್ಚಿಸುವ ಕೆಲಸದಲ್ಲಿಯೂ ಇಲಾಖೆ ತೊಡಗಿದೆ ಎಂದು ಅವರು ಹೇಳಿದ್ದಾರೆ. ಹೊಸ ಕಾಯ್ದೆಯು 2026ರ ಏಪ್ರಿಲ್‌ 1ರಿಂದ ಜಾರಿಗೆ ಬರಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.