ADVERTISEMENT

ಐಟಿಆರ್‌ ಸಲ್ಲಿಕೆ ಗಡುವು ಡಿಸೆಂಬರ್‌ 31ರವರೆಗೆ ವಿಸ್ತರಣೆ

ಪಿಟಿಐ
Published 24 ಅಕ್ಟೋಬರ್ 2020, 10:31 IST
Last Updated 24 ಅಕ್ಟೋಬರ್ 2020, 10:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: 2019–20ನೇ ಹಣಕಾಸು ವರ್ಷಕ್ಕೆ ಆದಾಯ ತೆರಿಗೆ ಲೆಕ್ಕಪತ್ರ ವಿವರ ಸಲ್ಲಿಕೆಯ (ಐಟಿಆರ್‌) ಗಡುವನ್ನು ಡಿಸೆಂಬರ್‌ 31ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಶನಿವಾರ ತಿಳಿಸಿದೆ.

ಕೇಂದ್ರ ಸರ್ಕಾರ ಮೇ ತಿಂಗಳಿನಲ್ಲಿ ಐಟಿಆರ್‌ ಗಡುವನ್ನು ಜುಲೈ 31ರಿಂದ ನವೆಂಬರ್‌ 30ರವರೆಗೆ ವಿಸ್ತರಣೆ ಮಾಡಿತ್ತು.

ಆದಾಯ ತೆರಿಗೆ ಲೆಕ್ಕಪತ್ರ ತಪಾಸಣೆ ಆಗಬೇಕಿರುವವರಿಗೆ ಐಟಿಆರ್‌ ಸಲ್ಲಿಸಲು 2021 ಜನವರಿ 31ರವರೆಗೆ ಅವಕಾಶ ನೀಡಲಾಗಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು (ಸಿಬಿಡಿಟಿ) ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.