ಬ್ಯಾಡಗಿ: ಇಲ್ಲಿಯ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಸೋಮವಾರ 2.68 ಲಕ್ಷ ಚೀಲ (67,088 ಕ್ವಿಂಟಲ್) ಮೆಣಸಿನಕಾಯಿ ಮಾರಾಟಕ್ಕೆ ತರಲಾಗಿದ್ದು, ಆವಕದಲ್ಲಿ ಮತ್ತೆ ಹೆಚ್ಚಳ ಕಂಡು ಬಂದಿದೆ.
ಪ್ರಸಕ್ತ ಹಂಗಾಮಿನಲ್ಲಿ ಮೊದಲ ಬಾರಿಗೆ 2.68 ಲಕ್ಷ ಚೀಲ ಆವಕವಾಗಿದೆ. ಕಳೆದ ಶುಕ್ರವಾರ ಮಾರುಕಟ್ಟೆಗೆ 2.24 ಲಕ್ಷ ಚೀಲ (56,118 ಕ್ವಿಂಟಲ್) ಮೆಣಸಿನಕಾಯಿ ಆವಕವಾಗಿತ್ತು. ಸೋಮವಾರ ಒಟ್ಟಾರೆ 21,236 ಲಾಟ್ ಮೆಣಸಿನಕಾಯಿ ಚೀಲಗಳನ್ನು ಟೆಂಡರ್‌ಗೆ ಇಡಲಾಗಿತ್ತು.
ಡಬ್ಬಿ ಮೆಣಸಿನಕಾಯಿ ಕ್ವಿಂಟಲ್‌ಗೆ ₹34,249 ರಂತೆ, ಕಡ್ಡಿ ಮೆಣಸಿನಕಾಯಿ ₹27,559 ರಂತೆ ಹಾಗೂ ಗುಂಟೂರು ತಳಿ ಮೆಣಸಿನಕಾಯಿ ₹15,609ರಂತೆ ಗರಿಷ್ಠ ಬೆಲೆಗೆ
ಮಾರಾಟವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.