ADVERTISEMENT

ಅಡುಗೆ ಎಣ್ಣೆ: ಸುಂಕ ವಿನಾಯಿತಿ ವಿಸ್ತರಣೆ

ರಾಯಿಟರ್ಸ್
Published 30 ಡಿಸೆಂಬರ್ 2022, 14:08 IST
Last Updated 30 ಡಿಸೆಂಬರ್ 2022, 14:08 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆ ಆಮದು ಸುಂಕಕ್ಕೆ ನೀಡಿರುವ ವಿನಾಯಿತಿಯು 2024ರ ಮಾರ್ಚ್‌ 31ರವರೆಗೂ ಮುಂದುವರಿಯಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆಗಳ ದರವು ದಾಖಲೆ ಮಟ್ಟಕ್ಕೆ ಏರಿಕೆ ಕಂಡಿದ್ದರಿಂದಾಗಿ ಭಾರತವು 2021ರ ಮಧ್ಯಭಾಗದಿಂದ ಆಮದು ಸುಂಕವನ್ನು ಕಡಿಮೆ ಮಾಡಿತು. ಈ ಸುಂಕ ವಿನಾಯಿತಿಯು 2023ರ ಮಾರ್ಚ್‌ 31ಕ್ಕೆ ಕೊನೆಯಾಗಲಿದೆ. ಹೀಗಾಗಿ ಸರ್ಕಾರವು ಸುಂಕ ವಿನಾಯಿತಿ ಪ್ರಯೋಜನವನ್ನು ಇನ್ನೂ ಒಂದು ವರ್ಷದವರೆಗೆ ವಿಸ್ತರಣೆ ಮಾಡಿ ಗುರುವಾರ ತಡರಾತ್ರಿ ಅಧಿಸೂಚನೆ ಹೊರಡಿಸಿದೆ.

ಭಾರತವು ಸದ್ಯ ಕಚ್ಚಾ ತಾಳೆ ಎಣ್ಣೆ ಆಮದು ಮೇಲೆ ಶೇಕಡ 5.5ರಷ್ಟು ಸುಂಕ ವಿಧಿಸುತ್ತಿದೆ. 2021ರ ಆರಂಭದಲ್ಲಿ ಸುಂಕವು ಶೇ 35.75ರಷ್ಟು ಇತ್ತು. ಭಾರತವು ತಾಳೆ ಎಣ್ಣೆಯನ್ನು ಇಂಡೊನೇಷ್ಯಾ ಮತ್ತು ಮಲೇಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆಗಳನ್ನು ಅರ್ಜೆಂಟೀನಾ, ಬ್ರೆಜಿಲ್‌, ಉಕ್ರೇನ್‌ ಮತ್ತು ರಷ್ಯಾದಿಂದ ತರಿಸಿಕೊಳ್ಳುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.