ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಆರ್ಥಿಕ ಬೆಳವಣಿಗೆ ಶೇ 6.4ರಿಂದ ಶೇ 6.7ರಷ್ಟು ಇರುವ ನಿರೀಕ್ಷೆ ಇದೆ ಎಂದು ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ಅಧ್ಯಕ್ಷ ರಾಜೀವ್ ಮೆಮಾನಿ ಗುರುವಾರ ಹೇಳಿದ್ದಾರೆ.
ಸಿಐಐ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತಮ ಮುಂಗಾರು ನಿರೀಕ್ಷೆ, ಆರ್‌ಬಿಐನಿಂದ ನಗದು ಮೀಸಲು ಅನುಪಾತ (ಸಿಆರ್‌ಆರ್) ಕಡಿತದಿಂದ ಹೆಚ್ಚುವ ನಗದು ಪ್ರಮಾಣದ ಲಭ್ಯತೆ ಮತ್ತು ಬಡ್ಡಿ ದರ ಕಡಿತದಂತಹ ಅಂಶಗಳು ದೇಶದ ಆರ್ಥಿಕ ಪ್ರಗತಿಗೆ ಬೆಂಬಲ ನೀಡಲಿವೆ ಎಂದು ಹೇಳಿದ್ದಾರೆ.
ಜಾಗತಿಕ ರಾಜಕೀಯ ಅನಿಶ್ಚಿತತೆಯ ಸ್ಥಿತಿಯ ನಡುವೆಯೂ ದೇಶದ ಬೇಡಿಕೆಗಳು ಉತ್ತಮವಾಗಿವೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.