ನವದೆಹಲಿ: ಮುಕ್ತ ವ್ಯಾಪಾರ ಒಪ್ಪಂದಕ್ಕೆ (ಎಫ್‌ಟಿಎ) ಸಂಬಂಧಿಸಿದಂತೆ ಭಾರತ ಮತ್ತು ಐರೋಪ್ಯ ಒಕ್ಕೂಟದ ಮುಖ್ಯ ಸಮಾಲೋಚಕರು ಸೋಮವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎಫ್‌ಟಿಎ ಸಂಬಂಧ ಎರಡು ಹಂತದಲ್ಲಿ ಒಪ್ಪಂದಕ್ಕೆ ಅಂಕಿತ ಹಾಕಲಾಗುತ್ತದೆ. ಹಾಗಾಗಿ, ಮಾತುಕತೆಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಮೂಲಕ ಮೊದಲ ಹಂತದ ಒಪ್ಪಂದಕ್ಕೆ ಸಹಿ ಹಾಕಲು ಎರಡೂ ಕಡೆಯಿಂದ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿವೆ.
2023-24ರಲ್ಲಿ ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ ದ್ವಿಪಕ್ಷೀಯ ವ್ಯಾಪಾರದ ಮೌಲ್ಯ ₹11.73 ಲಕ್ಷ ಕೋಟಿ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.