
ಪಿಟಿಐ
ನವದೆಹಲಿ: ‘ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದವು (ಎಫ್‌ಟಿಎ) ‘ಎಲ್ಲ ಒಪ್ಪಂದಗಳ ತಾಯಿ’ ಆಗಿರುತ್ತದೆ’ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ.
ಈ ಪ್ರಸ್ತಾವಿತ ವ್ಯಾಪಾರ ಒಪ್ಪಂದವು ಪರಸ್ಪರ ಪ್ರಯೋಜನಕಾರಿಯಾಗಿದ್ದು, ಒಪ್ಪಂದದ ಮಾತುಕತೆಯು ಅಂತಿಮ ಹಂತದಲ್ಲಿದೆ. ಅಲ್ಲದೆ, ಭಾರತವು ನಿರೀಕ್ಷಿಸಿದ ರೀತಿಯಲ್ಲಿ ಈ ಒಪ್ಪಂದ ಫಲಪ್ರದವಾಗಲಿದೆ ಎಂದು ಶುಕ್ರವಾರ ಹೇಳಿದ್ದಾರೆ.
2014ರಿಂದ ಇಲ್ಲಿಯವರೆಗೆ ಭಾರತವು, ಏಳು ವ್ಯಾಪಾರ ಒಪ್ಪಂದಗಳನ್ನು ಅಂತಿಮಗೊಳಿಸಿದೆ. ಆಸ್ಟ್ರೇಲಿಯಾ, ಬ್ರಿಟನ್, ಓಮನ್, ನ್ಯೂಜಿಲ್ಯಾಂಡ್, ಯುಎಇ, ಐರೋಪ್ಯ ಮುಕ್ತ ವ್ಯಾಪಾರ ಒಕ್ಕೂಟ (ಇಎಫ್‌ಟಿಎ) ಮತ್ತು ಮಾರಿಷಷ್ ನಡುವೆ ಒಪ್ಪಂದ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.