ADVERTISEMENT

ವಿದೇಶಿ ವಿನಿಮಯ ಸಂಗ್ರಹ ಇಳಿಕೆ: ಆರ್‌ಬಿಐ

ಪಿಟಿಐ
Published 14 ಫೆಬ್ರುವರಿ 2026, 14:15 IST
Last Updated 14 ಫೆಬ್ರುವರಿ 2026, 14:15 IST
.
.   

ಮುಂಬೈ: ಫೆಬ್ರುವರಿ 6ಕ್ಕೆ ಕೊನೆಗೊಂಡ ವಾರದಲ್ಲಿ ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ₹60 ಸಾವಿರ ಕೋಟಿಯಷ್ಟು ಇಳಿಕೆ ಆಗಿದೆ.

ಒಟ್ಟು ಮೀಸಲು ಸಂಗ್ರಹವು ₹64.93 ಲಕ್ಷ ಕೋಟಿಗೆ ಇಳಿದಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ತಿಳಿಸಿದೆ.

ಜನವರಿ 30ಕ್ಕೆ ಕೊನೆಗೊಂಡ ವಾರದಲ್ಲಿ ಇದು ₹65.54 ಲಕ್ಷ ಕೋಟಿಯಷ್ಟಾಗಿತ್ತು. ಇದು ಇದುವರೆಗಿನ ಗರಿಷ್ಠ ಮಟ್ಟವಾಗಿದೆ. 

ADVERTISEMENT

ವಿದೇಶಿ ಕರೆನ್ಸಿಗಳ ಸಂಪತ್ತಿನ ಮೌಲ್ಯ ₹69,374 ಕೋಟಿಯಷ್ಟು ಹೆಚ್ಚಳವಾಗಿದ್ದು, ₹51.62 ಲಕ್ಷ ಕೋಟಿಯಾಗಿದೆ. ಚಿನ್ನದ ಮೀಸಲು ಸಂಗ್ರಹದಲ್ಲಿ ₹1.28 ಲಕ್ಷ ಕೋಟಿ ಇಳಿಕೆಯಾಗಿದ್ದು, ₹11.18 ಲಕ್ಷ ಕೋಟಿಯಾಗಿದೆ. ಸ್ಪೆಷಲ್ ಡ್ರಾಯಿಂಗ್ ರೈಟ್ಸ್‌ (ಎಸ್‌ಡಿಆರ್) ₹1.70 ಲಕ್ಷ ಕೋಟಿ ಆಗಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿ ಭಾರತದ ಪಾಲು ₹42,696 ಕೋಟಿಯಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.