
ನವದೆಹಲಿ: ‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಶೇ 6.8ಕ್ಕಿಂತಲೂ ಹೆಚ್ಚಾಗುವ ವಿಶ್ವಾಸವಿದೆ’ ಎಂದು ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ಹೇಳಿದ್ದಾರೆ.
ಜಿಎಸ್‌ಟಿ ಇಳಿಕೆ ಮತ್ತು ಆದಾಯ ತೆರಿಗೆ ವಿನಾಯಿತಿಯಿಂದ ಜನರು ಹೆಚ್ಚು ವ್ಯಯಿಸಲು ಉತ್ತೇಜನ ನೀಡಿದೆ ಎಂದು ಶುಕ್ರವಾರ ಹೇಳಿದ್ದಾರೆ.
ಆರ್ಥಿಕ ಸಮೀಕ್ಷೆ ವರದಿ ಸಹ ಜಿಡಿಪಿ ಬೆಳವಣಿಗೆ ಶೇ 6.3ರಿಂದ ಶೇ 6.8ರಷ್ಟಾಗಲಿದೆ ಎಂದು ಅಂದಾಜಿಸಿದೆ. ಅಮೆರಿಕ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವು ಬೆಳವಣಿಗೆಗೆ ಉತ್ತೇಜನ ನೀಡಲಿದೆ. ಈ ಒಪ್ಪಂದ ಶೀಘ್ರ ಆಗಲಿದೆ ಎಂದು ಹೇಳಿದ್ದಾರೆ.
ಪ್ರಸಕ್ತ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಶೇ 7.8ರಷ್ಟಾಗಿತ್ತು. ಕೃಷಿ ವಲಯ ಮತ್ತು ಸೇವಾ ವಲಯದಿಂದ ಈ ಪ್ರಗತಿ ಸಾಧಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.