ಜಿಡಿಪಿ
ಸಾಂಕೇತಿಕ ಚಿತ್ರ
ನ್ಯೂಯಾರ್ಕ್/ ವಾಷಿಂಗ್ಟನ್: ಪ್ರಸಕ್ತ ಮತ್ತು ಮುಂದಿನ ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಒಟ್ಟು ಆಂತರಿಕ ಉತ್ಪಾದನೆ (ಜಿಡಿಪಿ) ಶೇ 6.4ರಷ್ಟು ಬೆಳವಣಿಗೆ ಕಾಣುವ ನಿರೀಕ್ಷೆಯಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಅಂದಾಜಿಸಿದೆ.
ಜನರು ಸರಕು ಮತ್ತು ಸೇವೆಗಳನ್ನು ಪಡೆದುಕೊಳ್ಳುವುದರ ಮೇಲೆ ವ್ಯಯಿಸುವ ಪ್ರಮಾಣ ಹೆಚ್ಚಳವಾಗಿದೆ. ಅಲ್ಲದೆ, ಸರ್ಕಾರಗಳು ಹೂಡಿಕೆ ಹೆಚ್ಚಳ ಮಾಡಿವೆ. ಇವು ಬೆಳವಣಿಗೆಗೆ ನೆರವಾಗಿವೆ ಎಂದು ಐಎಂಎಫ್‌ನ ಸಂಶೋಧನಾ ವಿಭಾಗದ ಮುಖ್ಯಸ್ಥೆ ಡೆನಿಜ್ ಇಗನ್ ಹೇಳಿದ್ದಾರೆ.
ಭಾರತವು, ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಕಾರ್ಮಿಕರಿಗೆ ಮರು ಕೌಶಲ ನೀಡಲಾಗುತ್ತಿದೆ. ಮೂಲಸೌಕರ್ಯ ವಲಯದಲ್ಲಿ ನಿರಂತರವಾಗಿ ಹೂಡಿಕೆ ಮಾಡುತ್ತಿದ್ದು, ವ್ಯಾಪಾರಕ್ಕಿರುವ ನಿರ್ಬಂಧಗಳನ್ನು ತೆಗೆಯುತ್ತಿದೆ ಎಂದು ತಿಳಿಸಿದ್ದಾರೆ.
ಆದರೂ, ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ ಮಾಡುವ ಅಗತ್ಯವಿದೆ. ಭೂ ಸುಧಾರಣೆಗೆ ಒತ್ತು ನೀಡಬೇಕಿದೆ ಮತ್ತು ಸಾಮಾಜಿಕ ಭದ್ರತೆ ಹೆಚ್ಚಿಸಬೇಕಿದೆ. ಉತ್ತಮ ವ್ಯವಹಾರ ನಡೆಸಲು ವಿಳಂಬ ಧೋರಣೆಯನ್ನು ಕಡಿಮೆ ಮಾಡಬೇಕಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.