ಸಾಂಕೇತಿಕ ಚಿತ್ರ
ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಫೆಬ್ರುವರಿವರೆಗೆ ಭಾರತವು ಚೀನಾದಿಂದ 8.47 ಲಕ್ಷ ಟನ್ ಡಿ-ಅಮೋನಿಯಂ ಫಾಸ್ಫೇಟ್ (ಡಿಎಪಿ) ರಸಗೊಬ್ಬರವನ್ನು ಆಮದು ಮಾಡಿಕೊಂಡಿದೆ ಎಂದು ಕೇಂದ್ರ ಸರ್ಕಾರದ ಅಂಕಿಅಂಶ ತಿಳಿಸಿವೆ.
ಈ ಅವಧಿಯಲ್ಲಿ 44.19 ಲಕ್ಷ ಟನ್ ಡಿಎಪಿ ಆಮದು ಮಾಡಿಕೊಳ್ಳಲಾಗಿದ್ದು, ಇದರಲ್ಲಿ ಚೀನಾದ ಪಾಲು ಶೇ 19.17ರಷ್ಟಿದೆ. ಕಳೆದ ಆರ್ಥಿಕ ವರ್ಷದಲ್ಲಿ ಒಟ್ಟು 55.67 ಲಕ್ಷ ಟನ್ ಆಮದು ಮಾಡಿಕೊಳ್ಳಲಾಗಿತ್ತು. ಈ ಪೈಕಿ ಚೀನಾದ ಪಾಲು 22.28 ಲಕ್ಷ ಟನ್ ಇತ್ತು.
ದೇಶದಲ್ಲಿ ಯೂರಿಯಾ ನಂತರ ಅತಿಹೆಚ್ಚು ಪ್ರಮಾಣದಲ್ಲಿ ಡಿಎಪಿ ಬಳಸಲಾಗುತ್ತದೆ. ದೇಶೀಯ ಬೇಡಿಕೆಗೆ ಅನುಗುಣವಾಗಿ ರಷ್ಯಾ, ಸೌದಿ ಅರೇಬಿಯಾ, ಮೊರಾಕ್ಕೊ ಮತ್ತು ಜೋರ್ಡಾನ್‌ನಿಂದ ಆಮದು ಮಾಡಿಕೊಳ್ಳಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.