ADVERTISEMENT

ಮೂಲಸೌಕರ್ಯ ವಲಯದ ಬೆಳವಣಿಗೆ 13 ತಿಂಗಳ ಗರಿಷ್ಠ: ಕೇಂದ್ರ ಸರ್ಕಾರ

ಪಿಟಿಐ
Published 22 ಸೆಪ್ಟೆಂಬರ್ 2025, 15:21 IST
Last Updated 22 ಸೆಪ್ಟೆಂಬರ್ 2025, 15:21 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದ ಪ್ರಮುಖ ಎಂಟು ಮೂಲಸೌಕರ್ಯ ವಲಯಗಳ ಬೆಳವಣಿಗೆ ಆಗಸ್ಟ್‌ನಲ್ಲಿ 13 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆ ಆಗಿದ್ದು, ಶೇ 6.3ರಷ್ಟು ದಾಖಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.

ಕಲ್ಲಿದ್ದಲು, ಉಕ್ಕು, ಸಿಮೆಂಟ್ ಉತ್ಪಾದನೆಯಲ್ಲಿನ ಹೆಚ್ಚಳದಿಂದಾಗಿ ಈ ಬೆಳವಣಿಗೆ ಸಾಧ್ಯವಾಗಿದೆ ಎಂದು ತಿಳಿಸಿದೆ.

ಜುಲೈನಲ್ಲಿ ವಲಯದ ಉತ್ಪಾದನೆ ಶೇ 3.7ರಷ್ಟಿತ್ತು. ಕಳೆದ ವರ್ಷದ ಆಗಸ್ಟ್‌ನಲ್ಲಿ ಬೆಳವಣಿಗೆ ಶೇ (–) 1.5 ದಾಖಲಾಗಿತ್ತು. 

ADVERTISEMENT

ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌ನಿಂದ ಆಗಸ್ಟ್‌ವರೆಗಿನ ಅವಧಿಯಲ್ಲಿ ವಲಯದ ಪ್ರಗತಿ ಶೇ 2.8ರಷ್ಟಾಗಿದೆ ಎಂದು ಕೇಂದ್ರ ತಿಳಿಸಿದೆ. ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಇದು ಶೇ 4.6ರಷ್ಟಿತ್ತು.

ಕಲ್ಲಿದ್ದಲು (ಶೇ 11.4), ಉಕ್ಕು (ಶೇ 14.2), ಸಿಮೆಂಟ್‌ (ಶೇ 6.1), ಸಂಸ್ಕರಿಸಿದ ಉತ್ಪನ್ನಗಳು (ಶೇ 3), ರಸಗೊಬ್ಬರ (ಶೇ 4.6) ಮತ್ತು ವಿದ್ಯುತ್‌ (ಶೇ 3.1ರಷ್ಟು) ಉತ್ಪಾದನೆ ಹೆಚ್ಚಳವಾಗಿದೆ. ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲ ಉತ್ಪಾದನೆ ಇಳಿಕೆ ಆಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.