ನವದೆಹಲಿ: ಭಾರತ ಮತ್ತು ಇಸ್ರೇಲ್ ನಡುವೆ ದ್ವಿಪಕ್ಷೀಯ ಹೂಡಿಕೆ ಒಪ್ಪಂದಕ್ಕೆ (ಬಿಐಟಿ) ಸಹಿ ಹಾಕಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಸೋಮವಾರ ಹೇಳಿದೆ. ಈ ಒಪ್ಪಂದವು ಎರಡೂ ದೇಶಗಳ ನಡುವೆ ಹೂಡಿಕೆಗಳಿಗೆ ಉತ್ತೇಜನ ನೀಡಲು ನೆರವಾಗಲಿದೆ ಎಂದು ಅದು ತಿಳಿಸಿದೆ.
‘ಒಪ್ಪಂದಕ್ಕೆ ನವದೆಹಲಿಯಲ್ಲಿ ಸೋಮವಾರ ಸಹಿ ಮಾಡಲಾಗಿದೆ’ ಎಂದು ಹಣಕಾಸು ಸಚಿವಾಲಯವು ಎಕ್ಸ್ ಮೂಲಕ ತಿಳಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇಸ್ರೇಲ್‌ನ ಹಣಕಾಸು ಸಚಿವ ಬೆಜಲೆಲ್ ಸ್ಮೊಟ್ರಿಕ್ ಅವರು ಒಪ್ಪಂದಕ್ಕೆ ಸಹಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.