ADVERTISEMENT

ಭಾರತ, ಒಮಾನ್‌ ನಡುವೆ ವ್ಯಾಪಾರ ಒಪ್ಪಂದ: ಆರ್ಥಿಕ ಸಂಬಂಧ ಬಲಪಡಿಸುವ ನಿರೀಕ್ಷೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2025, 14:48 IST
Last Updated 17 ಡಿಸೆಂಬರ್ 2025, 14:48 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ </p></div>

ಪ್ರಧಾನಿ ನರೇಂದ್ರ ಮೋದಿ

   

(ಸಂಗ್ರಹ ಚಿತ್ರ) 

ನವದೆಹಲಿ: ಭಾರತ ಮತ್ತು ಒಮಾನ್ ದೇಶದ ನಡುವೆ ಮಸ್ಕತ್‌ನಲ್ಲಿ ಗುರುವಾರ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಬೀಳಲಿದೆ. ಈ ಒಪ್ಪಂದವು ಎರಡೂ ದೇಶಗಳ ನಡುವಿನ ಆರ್ಥಿಕ ಸಂಬಂಧವನ್ನು ಬಲಪಡಿಸುವ ನಿರೀಕ್ಷೆ ಇದೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗುತ್ತದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಅವರೂ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

‘ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ’ ಎಂಬುದು ಈ ಮುಕ್ತ ವ್ಯಾಪಾರ ಒಪ್ಪಂದದ ಅಧಿಕೃತ ಹೆಸರು. ಇದಕ್ಕೆ ಸಂಬಂಧಿಸಿದ ಮಾತುಕತೆಗಳು 2023ರ ನವೆಂಬರ್‌ನಲ್ಲಿ ಶುರುವಾದವು. ಈ ವರ್ಷದಲ್ಲಿ ಮಾತುಕತೆ ಪೂರ್ಣಗೊಂಡಿತು.

ಗಲ್ಫ್‌ ಸಹಕಾರ ಮಂಡಳಿಯ (ಜಿಸಿಸಿ) ಸದಸ್ಯ ರಾಷ್ಟ್ರಗಳ ಪೈಕಿ ಭಾರತದ ಸರಕುಗಳನ್ನು ಅತಿಹೆಚ್ಚಿನ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುವ ದೇಶಗಳ ಸಾಲಿನಲ್ಲಿ ಒಮಾನ್‌ ಮೂರನೆಯ ಸ್ಥಾನದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.