ರೂಪಾಯಿ ಮೌಲ್ಯ
Credit: iStock Image
ಮುಂಬೈ: ಭಾರತ ಮತ್ತು ಪಾಕಿಸ್ತಾನದ ನಡುವೆ ತಲೆದೋರಿರುವ ಬಿಕ್ಕಟ್ಟಿನಿಂದಾಗಿ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ರೂಪಾಯಿ ಮೌಲ್ಯವು ಕುಸಿತ ಕಂಡಿದೆ.
ಅಮೆರಿಕದ ಡಾಲರ್ ಎದುರು 30 ಪೈಸೆ ಇಳಿಕೆಯಾಗಿದೆ. ಪ್ರತೀ ಡಾಲರ್ ಮೌಲ್ಯ ₹85.88 ಆಗಿದೆ.
ಮತ್ತೊಂದೆಡೆ ಡಾಲರ್ ಸೂಚ್ಯಂಕ ಏರಿಕೆ ಕಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆಯಾಗಿದೆ. ಈ ಅಂಶಗಳು ರೂಪಾಯಿ ಮೌಲ್ಯ ಇಳಿಕೆಗೆ ಕಾರಣವಾಗಿವೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಉಭಯ ದೇಶಗಳ ನಡುವಿನ ಬಿಕ್ಕಟ್ಟು ಮುಂದುವರಿದರೆ ರೂಪಾಯಿಯು ಮತ್ತಷ್ಟು ಒತ್ತಡಕ್ಕೆ ಸಿಲುಕುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಗುರುವಾರ 84 ಪೈಸೆ ಇಳಿಕೆಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.