
ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ವಿದೇಶಿ ನೇರ ಹೂಡಿಕೆಗೆ (ಎಫ್‌ಡಿಐ) ಇರುವ ಶೇಕಡ 20ರ ಮಿತಿಯನ್ನು, ಶೇ 49ಕ್ಕೆ ಹೆಚ್ಚಿಸುವ ಚಿಂತನೆ ನಡೆದಿದೆ ಎಂಬ ಸುದ್ದಿಯು ಬಿತ್ತರವಾದ ನಂತರದಲ್ಲಿ ಬ್ಯಾಂಕಿಂಗ್ ವಲಯದ ‘ನಿಫ್ಟಿ ಪಿಎಸ್‌ಯು ಬ್ಯಾಂಕ್’ ಸೂಚ್ಯಂಕವು ಶೇಕಡ 3ರವರೆಗೆ ಜಿಗಿದಿದೆ.
ಸರ್ಕಾರಿ ಬ್ಯಾಂಕ್‌ಗಳಲ್ಲಿ ಎಫ್‌ಡಿಐ ಹೆಚ್ಚಳವು, ನಿಯಮಗಳ ವಿಚಾರದಲ್ಲಿ ಸರ್ಕಾರಿ ಹಾಗೂ ಖಾಸಗಿ ಬ್ಯಾಂಕ್‌ಗಳ ನಡುವಿನ ಅಂತರವನ್ನು ತಗ್ಗಿಸುವ ಪ್ರಯತ್ನದ ಭಾಗವೂ ಆಗಿದೆ ಎಂದು ಮೂಲಗಳು ಹೇಳಿವೆ. ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಶೇ 74ರಷ್ಟು ಎಫ್‌ಡಿಐಗೆ ಅವಕಾಶ ಇದೆ.
ಈ ವಿಚಾರವಾಗಿ ಆರ್‌ಬಿಐ ಹಾಗೂ ಹಣಕಾಸು ಸಚಿವಾಲಯದಿಂದ ಪ್ರತಿಕ್ರಿಯೆ ಲಭ್ಯವಾಗಿಲ್ಲ.
ದೇಶದ ಆರ್ಥಿಕ ಬೆಳವಣಿಗೆ ದರವು ಕಳೆದ ಮೂರು ವರ್ಷಗಳಿಂದ ಸರಾಸರಿ ಶೇ 8ರಷ್ಟಿದೆ. ಇದರಿಂದಾಗಿ ಸಾಲಕ್ಕೆ ಬೇಡಿಕೆ ಹೆಚ್ಚಾಗಿದೆ, ದೇಶದ ಬ್ಯಾಂಕ್‌ಗಳು ಹೂಡಿಕೆಗೆ ಆಕರ್ಷಕವಾಗುತ್ತಿವೆ.
ದೇಶದಲ್ಲಿ 12 ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿವೆ. ಈ ಬ್ಯಾಂಕ್‌ಗಳಲ್ಲಿ ಕನಿಷ್ಠ ಶೇ 51ರಷ್ಟು ಪಾಲನ್ನು ಉಳಿಸಿಕೊಳ್ಳುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಈಗ ದೇಶದ ಸರ್ಕಾರಿ ಬ್ಯಾಂಕ್‌ಗಳಲ್ಲಿ ಎಫ್‌ಡಿಐ ಪ್ರಮಾಣವು ಒಂದೊಂದು ಬ್ಯಾಂಕ್‌ನಲ್ಲಿ ಒಂದೊಂದು ಮಟ್ಟದಲ್ಲಿದೆ. ಕೆನರಾ ಬ್ಯಾಂಕ್‌ನಲ್ಲಿ ಅದು ಶೇ 12ರಷ್ಟಿದೆ.
ಸಮಾಜದ ದುರ್ಬಲ ವರ್ಗಗಳಿಗೂ ಸಾಲ ನೀಡುವ ಹೊಣೆಯು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಮೇಲೆ ಇರುವ ಕಾರಣ ಹೂಡಿಕೆಯ ದೃಷ್ಟಿಯಿಂದ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಖಾಸಗಿ ವಲಯದ ಬ್ಯಾಂಕ್‌ಗಳಷ್ಟು ಬಲಿಷ್ಠವಲ್ಲ ಎಂಬ ನಂಬಿಕೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.