ADVERTISEMENT

ಚಿಲ್ಲರೆ ಹಣದುಬ್ಬರ ಹೆಚ್ಚಳ

ಪಿಟಿಐ
Published 12 ಡಿಸೆಂಬರ್ 2025, 14:44 IST
Last Updated 12 ಡಿಸೆಂಬರ್ 2025, 14:44 IST
   

ನವದೆಹಲಿ: ಆಹಾರ ಪದಾರ್ಥಗಳ ಬೆಲೆಯಲ್ಲಿನ ಹೆಚ್ಚಳದಿಂದ ಚಿಲ್ಲರೆ ಹಣದುಬ್ಬರವು ನವೆಂಬರ್‌ ತಿಂಗಳಿನಲ್ಲಿ ಶೇ 0.71ಕ್ಕೆ ಏರಿಕೆಯಾಗಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಶುಕ್ರವಾರ ತಿಳಿಸಿದೆ. 

ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಚಿಲ್ಲರೆ ಹಣದುಬ್ಬರವು ಅಕ್ಟೋಬರ್‌ನಲ್ಲಿ ಶೇ 0.25ಕ್ಕೆ ಇಳಿಕೆಯಾಗಿತ್ತು. ಜಿಎಸ್‌ಟಿ ದರ ಪರಿಷ್ಕರಣೆಯು ಇಳಿಕೆಗೆ ನೆರವಾಗಿತ್ತು. ಹಣದುಬ್ಬರವು ಸತತ ಎರಡನೇ ತಿಂಗಳೂ ಶೇ 1ರೊಳಗೆ ಇದೆ.

ಆಹಾರ ಪದಾರ್ಥಗಳ ಹಣದುಬ್ಬರವು ನವೆಂಬರ್‌ನಲ್ಲಿ ಶೇ 3.91ರಷ್ಟಿದೆ. ತರಕಾರಿಗಳು, ಮೊಟ್ಟೆ, ಮಾಂಸ ಮತ್ತು ಮೀನು, ಮಸಾಲೆ ಪದಾರ್ಥಗಳು, ಇಂಧನ ಬೆಲೆಯಲ್ಲಿನ ಹೆಚ್ಚಳವೇ ಹಣದುಬ್ಬರ ಏರಿಕೆಗೆ ಕಾರಣ ಎಂದು ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.