ನವದೆಹಲಿ: ರಷ್ಯಾದಿಂದ ಕಚ್ಚಾ ತೈಲ ಖರೀದಿಸುವುದನ್ನು ಭಾರತ ಮುಂದುವರಿಸಬೇಕು ಮತ್ತು ಅಮೆರಿಕದ ಸುಂಕ ಹೇರಿಕೆ ಬೆದರಿಕೆಯನ್ನು ಎದುರಿಸಿ ನಿಲ್ಲಬೇಕು ಎಂದು ಗ್ಲೋಬಲ್ ಟ್ರೇಡ್ ರಿಸರ್ಚ್ ಇನಿಷಿಯೇಟಿವ್ (ಜಿಟಿಆರ್‌ಐ) ಗುರುವಾರ ಹೇಳಿದೆ.
ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುವುದರಿಂದ ದೇಶದ ಹಣದುಬ್ಬರ ನಿರ್ವಹಿಸಲು ಮತ್ತು ಆರ್ಥಿಕ ಸ್ಥಿರತೆ ಕಾಪಾಡಿಕೊಳ್ಳಲು ಸಹಾಯಕವಾಗಿದೆ ಎಂದು ಜಿಟಿಆರ್‌ಐನ ಸಂಸ್ಥಾಪಕ ಅಜಯ್ ಶ್ರೀವಾಸ್ತವ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.