ADVERTISEMENT

‘ವಿದ್ಯುತ್ ಚಾಲಿತ ವಾಹನ: ಮುಂಚೂಣಿ ಸ್ಥಾನಕ್ಕೆ ಭಾರತ’

ಪಿಟಿಐ
Published 18 ಏಪ್ರಿಲ್ 2021, 15:42 IST
Last Updated 18 ಏಪ್ರಿಲ್ 2021, 15:42 IST

ನವದೆಹಲಿ: ಮುಂದಿನ ಆರು ತಿಂಗಳಲ್ಲಿ ಲಿಥಿಯಂ ಅಯಾನ್‌ ಬ್ಯಾಟರಿಗಳನ್ನು ಪೂರ್ಣ ಪ್ರಮಾಣದಲ್ಲಿ ಭಾರತದಲ್ಲಿಯೇ ತಯಾರಿಸಲಾಗುತ್ತದೆ, ಭಾರತವು ವಿದ್ಯುತ್ ಚಾಲಿತ ವಾಹನಗಳ ತಯಾರಿಕೆಯಲ್ಲಿ ವಿಶ್ವದಲ್ಲಿ ಮೊದಲ ಸ್ಥಾನ ಪಡೆಯಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಮೆಜಾನ್ ಆಯೋಜಿಸಿದ ‘ಸಂಭವ್ ಶೃಂಗ’ದಲ್ಲಿ ಮಾತನಾಡಿದ ಅವರು ಈ ಮಾತು ಹೇಳಿದರು. ಮುಂದಿನ ಎರಡು ವರ್ಷಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ ಬೆಲೆಯು ಕಡಿಮೆ ಆಗಲಿದೆ. ಆಗ ಅವು ಪೆಟ್ರೋಲ್, ಡೀಸೆಲ್ ಚಾಲಿತ ವಾಹನಗಳಷ್ಟೇ ಸ್ಪರ್ಧಾತ್ಮಕ ಆಗಲಿವೆ ಎಂದು ಗಡ್ಕರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT