
ಪಿಟಿಐ
ನವದೆಹಲಿ: ‘ಪ್ರಸಕ್ತ ಕ್ಯಾಲೆಂಡರ್ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಶೇ 7ರಷ್ಟು ಮತ್ತು 2026ರಲ್ಲಿ ಶೇ 6.4ರಷ್ಟು ಕಾಣುವ ನಿರೀಕ್ಷೆ ಇದೆ’ ಎಂದು ಜಾಗತಿಕ ರೇಟಿಂಗ್ಸ್ ಸಂಸ್ಥೆ ಮೂಡೀಸ್ ಶುಕ್ರವಾರ ಹೇಳಿದೆ.
ಭಾರತವು, ಅಭಿವೃದ್ಧಿ ಹೊಂದುತ್ತಿರುವ ದೇಶಗಳು ಮತ್ತು ಏಷ್ಯಾ–ಪೆಸಿಫಿಕ್ ಪ್ರದೇಶದಾದ್ಯಂತ ಬೆಳವಣಿಗೆಯನ್ನು ಮುನ್ನಡೆಸಲಿದೆ ಎಂದು ಹೇಳಿದೆ.
ಜಾಗತಿಕ ಅನಿಶ್ಚಿತತೆಯ ನಡುವೆಯೂ ದೇಶೀಯ ಬೇಡಿಕೆ ಹೆಚ್ಚಳದಿಂದ ಆರ್ಥಿಕ ಚಟುವಟಿಕೆ ಉತ್ತಮವಾಗಿದೆ. 2024ರಲ್ಲಿ ಏಷ್ಯಾ–ಪೆಸಿಫಿಕ್ ಪ್ರದೇಶದಲ್ಲಿ ಜಿಡಿಪಿ ಬೆಳವಣಿಗೆ ಶೇ 3.3ರಷ್ಟು ದಾಖಲಾಗಿತ್ತು. ಇದು 2025ರಲ್ಲಿ ಶೇ 3.6 ಮತ್ತು 2026ರಲ್ಲಿ ಶೇ 3.4ರಷ್ಟಾಗುವ ನಿರೀಕ್ಷೆ ಇದೆ ಎಂದು ಅಂದಾಜಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.