ADVERTISEMENT

ಭಾರತ–ಅಮೆರಿಕ ಒಪ್ಪಂದ ಏಪ್ರಿಲ್‌ನಲ್ಲಿ ಜಾರಿ: ಪೀಯೂಷ್ ಗೋಯಲ್

ಪಿಟಿಐ
Published 20 ಫೆಬ್ರುವರಿ 2026, 16:26 IST
Last Updated 20 ಫೆಬ್ರುವರಿ 2026, 16:26 IST
ಪೀಯೂಷ್ ಗೋಯಲ್
ಪೀಯೂಷ್ ಗೋಯಲ್   

ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಮಾರ್ಚ್‌ನಲ್ಲಿ ಸಹಿ ಬೀಳುವ ನಿರೀಕ್ಷೆ ಇದೆ, ಒಪ್ಪಂದವು ಏಪ್ರಿಲ್‌ನಲ್ಲಿ ಜಾರಿಗೆ ಬರಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಭಾರತ ಮತ್ತು ಅಮೆರಿಕವು ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು ಅಂತಿಮಗೊಳಿಸಿವೆ.

ಫೆಬ್ರುವರಿ 23ರಿಂದ ವಾಷಿಂಗ್ಟನ್‌ನಲ್ಲಿ ಮೂರು ದಿನ ನಡೆಯಲಿರುವ ಸಭೆಯಲ್ಲಿ ಭಾರತ ಮತ್ತು ಅಮೆರಿಕದ ಅಧಿಕಾರಿಗಳು ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಲಿದ್ದಾರೆ ಎಂದು ಎ.ಐ ಇಂಪ್ಯಾಕ್ಟ್‌ ಶೃಂಗ ಸಭೆಯಲ್ಲಿ ಹೇಳಿದ್ದಾರೆ.  

ADVERTISEMENT

ಅಮೆರಿಕದ ವ್ಯಾಪಾರ ಪ್ರತಿನಿಧಿ (ಯುಎಸ್‌ಟಿಆರ್‌) ಜೇಮ್‌ಸನ್ ಗ್ರೀರ್‌ ಭಾರತಕ್ಕೆ ಮಾರ್ಚ್‌ನಲ್ಲಿ ಭೇಟಿ ನೀಡಿ, ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆ ಇದೆ.

ಬ್ರಿಟನ್ ಮತ್ತು ಒಮಾನ್‌ ಜೊತೆ ಭಾರತ ಮಾಡಿಕೊಂಡಿರುವ ಮುಕ್ತ ವ್ಯಾಪಾರ ಒಪ್ಪಂದವು ಏಪ್ರಿಲ್‌ನಲ್ಲಿ ಅನುಷ್ಠಾನಗೊಳ್ಳುವ ನಿರೀಕ್ಷೆ ಇದೆ. ನ್ಯೂಜಿಲೆಂಡ್‌ ಜೊತೆಗಿನ ಒಪ್ಪಂದವು ಸೆಪ್ಟೆಂಬರ್‌ನಲ್ಲಿ ಜಾರಿಗೆ ಬರುವ ನಿರೀಕ್ಷೆ ಇದೆ ಎಂದು ಗೋಯಲ್ ಹೇಳಿದ್ದಾರೆ. 

ಶೃಂಗಸಭೆಯಲ್ಲಿ ಭಾಗವಹಿಸಿರುವ ಅಮೆರಿಕದ ರಾಯಭಾರಿ ಸರ್ಗಿಯೊ ಗೋರ್ ಮಾತನಾಡಿ, ಭಾರತ ಮತ್ತು ಅಮೆರಿಕದ ವ್ಯಾಪಾರ ಒಪ್ಪಂದವು ಶೀಘ್ರ ಆಗಲಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.