

ಅಮೆರಿಕ-ಭಾರತ ವ್ಯಾಪಾರ ಒಪ್ಪಂದ
(ಐಸ್ಟೋಕ್ ಸಾಂದರ್ಭಿಕ ಚಿತ್ರ)
ನವದೆಹಲಿ: ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಮಾರ್ಚ್‌ನಲ್ಲಿ ಸಹಿ ಹಾಕುವ ನಿರೀಕ್ಷೆ ಇದೆ. ಹಾಗಾಗಿ ಒಪ್ಪಂದದ ಕಾನೂನು ಪಠ್ಯವನ್ನು ಅಂತಿಮಗೊಳಿಸಲು ಭಾರತದ ಅಧಿಕಾರಿಗಳ ತಂಡವು ಮುಂದಿನ ವಾರ ಅಮೆರಿಕಕ್ಕೆ ಭೇಟಿ ನೀಡಲಿದೆ ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್‌ವಾಲ್ ತಿಳಿಸಿದ್ದಾರೆ.
ಫೆಬ್ರುವರಿ 23ರಂದು ಭಾರತದ ಅಧಿಕಾರಿಗಳ ತಂಡವು ಅಮೆರಿಕಕ್ಕೆ ತೆರಳುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಈ ತಿಂಗಳ ಆರಂಭದಲ್ಲಿ ಭಾರತ ಮತ್ತು ಅಮೆರಿಕವು ಜಂಟಿ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು ಅಂತಿಮಗೊಳಿಸಲಾಗಿದೆ ಎಂದು ಘೋಷಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.