
ಪಿಟಿಐ
ನವದೆಹಲಿ : ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ಮೊದಲ ಹಂತಕ್ಕೆ ಸಂಬಂಧಿಸಿದ ಮೂರು ದಿನಗಳ ಮಾತುಕತೆಯು ಡಿಸೆಂಬರ್ 10ರಿಂದ ಶುರುವಾಗಲಿದೆ ಎಂದು ಮೂಲಗಳು ಹೇಳಿವೆ.
ಅಮೆರಿಕವು ಭಾರತದ ಸರಕುಗಳ ಮೇಲೆ ಒಟ್ಟು ಶೇ 50ರಷ್ಟು ಸುಂಕ ಹೇರಿದ ನಂತರದಲ್ಲಿ ವ್ಯಾಪಾರ ಒಪ್ಪಂದದ ವಿಚಾರವಾಗಿ ಅಮೆರಿಕದ ತಂಡವು ಭಾರತಕ್ಕೆ ಭೇಟಿ ನೀಡುತ್ತಿರುವುದು ಇದು ಎರಡನೆಯ ಬಾರಿ.
ಅಮೆರಿಕದ ಅಧಿಕಾರಿಗಳು ಸೆಪ್ಟೆಂಬರ್ 16ರಂದು ಕೂಡ ಭಾರತಕ್ಕೆ ಬಂದಿದ್ದರು. ಭಾರತದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಅವರು ಅಧಿಕಾರಿಗಳ ತಂಡದೊಂದಿಗೆ ಸೆಪ್ಟೆಂಬರ್ 22ರಂದು ಅಮೆರಿಕಕ್ಕೆ ತೆರಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.