ADVERTISEMENT

ಭಾರತ–ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಮಾತುಕತೆ: ಷೇರು ಸೂಚ್ಯಂಕ ಏರಿಕೆ

ಪಿಟಿಐ
Published 17 ಸೆಪ್ಟೆಂಬರ್ 2025, 15:47 IST
Last Updated 17 ಸೆಪ್ಟೆಂಬರ್ 2025, 15:47 IST
ಷೇರು ಸೂಚ್ಯಂಕ
ಷೇರು ಸೂಚ್ಯಂಕ   

ಮುಂಬೈ: ಐ.ಟಿ., ಬ್ಯಾಂಕಿಂಗ್‌ ಮತ್ತು ಆಟೊ ವಲಯದ ಕಂಪನಿಗಳ ಷೇರುಗಳ ಖರೀದಿ ಹೆಚ್ಚಳದಿಂದ ಬುಧವಾರದ ವಹಿವಾಟಿನಲ್ಲಿ ದೇಶದ ಷೇರುಪೇಟೆ ಸೂಚ್ಯಂಕಗಳು ಏರಿಕೆ ಕಂಡಿವೆ. 

ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತಾಗಿ ಅಮೆರಿಕದ ನಿಯೋಗ ಮತ್ತು ಭಾರತದ ನಡುವಿನ ಸಕಾರಾತ್ಮಕ ಮಾತುಕತೆಯು ಹೂಡಿಕೆದಾರರಲ್ಲಿ ಉತ್ಸಾಹ ಮೂಡಿಸಿದೆ. ಜೊತೆಗೆ ಅಮೆರಿಕದ ಫೆಡರಲ್‌ ರಿಸರ್ವ್‌ ಬಡ್ಡಿ ದರ ಕಡಿತಗೊಳಿಸುವ ನಿರೀಕ್ಷೆ ಹೆಚ್ಚಿದೆ. ಇದು ಷೇರುಪೇಟೆ ಸೂಚ್ಯಂಕಗಳ ಏರಿಕೆಗೆ ಕಾರಣವಾಯಿತು ಎಂದು ಮಾರುಕಟ್ಟೆ ವಿಶ್ಲೇಷಕರು ಹೇಳಿದ್ದಾರೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 313 ಅಂಶ ಏರಿಕೆಯಾಗಿ, 82,693ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ 91 ಅಂಶ ಹೆಚ್ಚಳವಾಗಿ, 25,330ಕ್ಕೆ ಕೊನೆಗೊಂಡಿದೆ. 

ADVERTISEMENT

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ದರವು ಶೇ 0.58ರಷ್ಟು ಇಳಿಕೆಯಾಗಿದೆ. ಪ್ರತೀ ಬ್ಯಾರೆಲ್ ದರವು 68.07 ಡಾಲರ್ ಆಗಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಮಂಗಳವಾರದ ವಹಿವಾಟಿನಲ್ಲಿ ₹308 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.