ಚೆನ್ನೈ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸರ್ಕಾರಿ ಸ್ವಾಮ್ಯದ ಇಂಡಿಯನ್ ಬ್ಯಾಂಕ್, ಮಹಿಳಾ ಸ್ವಸಹಾಯ ಗುಂಪುಗಳಿಗೆ ₹20 ಸಾವಿರ ಕೋಟಿ ಸಾಲ ವಿತರಿಸುವ ಗುರಿ ಹೊಂದಿದೆ.
ದೇಶದ ಒಂದು ಕೋಟಿ ಮಹಿಳಾ ಸ್ವಸಹಾಯ ಗುಂಪುಗಳ ಸಬಲೀಕರಣಕ್ಕೆ ನಿರ್ಧರಿಸಲಾಗಿದೆ. ಇದರ ಭಾಗವಾಗಿ ಸಾಲ ವಿತರಿಸಲು ನಿರ್ಧರಿಸಲಾಗಿದೆ ಎಂದು ಬ್ಯಾಂಕ್ ತಿಳಿಸಿದೆ.
ಭುವನೇಶ್ವರದಲ್ಲಿ ನಡೆದ ಸ್ವಸಹಾಯ ಗುಂಪುಗಳಿಗೆ ಬೃಹತ್ ಸಾಲ ವಿತರಣಾ ಸಮಾರಂಭದಲ್ಲಿ 9,961 ಸ್ವಸಹಾಯ ಸಂಘಗಳಿಗೆ ₹509 ಕೋಟಿ ಸಾಲ ವಿತರಿಸಲಾಗಿದೆ. ತಳಮಟ್ಟದಲ್ಲಿ ಮಹಿಳಾ ಉದ್ಯಮಶೀಲತೆಗೆ ಉತ್ತೇಜನ ನೀಡುವುದು ಬ್ಯಾಂಕ್‌ನ ಗುರಿಯಾಗಿದೆ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.