
ನವದೆಹಲಿ: ಭಾರತದ ಅರ್ಥ ವ್ಯವಸ್ಥೆಯ ಗಾತ್ರವು ಪ್ರಸಕ್ತ ಹಣಕಾಸು ವರ್ಷದಲ್ಲಿ 4 ಟ್ರಿಲಿಯನ್ ಅಮೆರಿಕನ್ ಡಾಲರ್‌ಗಿಂತ (ಅಂದಾಜು ₹356 ಲಕ್ಷ ಕೋಟಿ) ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ಮಂಗಳವಾರ ಹೇಳಿದ್ದಾರೆ.
ಜಾಗತಿಕವಾಗಿ ಅನಿಶ್ಚಿತತೆಗಳು ಭಾರಿ ಮಟ್ಟದಲ್ಲಿ ಇರುವಾಗ, ವಿಶ್ವದಲ್ಲಿ ಭಾರತದ ಸ್ಥಾನವನ್ನು ಉಳಿಸಿಕೊಳ್ಳಲು ಆರ್ಥಿಕ ಬೆಳವಣಿಗೆಯು ಬಹಳ ಅಗತ್ಯವಾಗುತ್ತದೆ ಎಂದು ಅವರು ಹೇಳಿದ್ದಾರೆ.
ಭಾರತದ ಒಟ್ಟು ಆಂತರಿಕ ಉತ್ಪಾದನೆಯ (ಜಿಡಿಪಿ) ಗಾತ್ರವು ಈಗ 3.9 ಟ್ರಿಲಿಯನ್ ಅಮೆರಿಕನ್ ಡಾಲರ್ (ಅಂದಾಜು ₹347 ಲಕ್ಷ ಕೋಟಿ) ಆಗಿದೆ. ಇದು ವಿಶ್ವದ ಐದನೆಯ ಅತಿದೊಡ್ಡ ಅರ್ಥ ವ್ಯವಸ್ಥೆಯಾಗಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಾಗೇಶ್ವರನ್ ಅವರು, ‘ಮಾರ್ಚ್‌ನಲ್ಲಿ 3.9 ಟ್ರಿಲಿಯನ್ ಡಾಲರ್‌ನಷ್ಟಿದ್ದ ಭಾರತದ ಅರ್ಥ ವ್ಯವಸ್ಥೆಯು ಈಗ 4 ಟ್ರಿಲಿಯನ್ ಡಾಲರ್‌ನ ಗಡಿಯನ್ನು ದಾಟುತ್ತಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.