ADVERTISEMENT

ಬಡ್ಡಿದರ ಇಳಿಸಿದ ಐಒಬಿ

ಪಿಟಿಐ
Published 12 ಏಪ್ರಿಲ್ 2025, 13:07 IST
Last Updated 12 ಏಪ್ರಿಲ್ 2025, 13:07 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಚೆನ್ನೈ: ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ (ಐಒಬಿ) ರೆಪೊ ಆಧರಿತ ಸಾಲದ ಮೇಲಿನ ಬಡ್ಡಿದರವನ್ನು ಶೇ 0.25ರಷ್ಟು ಕಡಿತಗೊಳಿಸಿದೆ. 

ಬ್ಯಾಂಕ್‌ನ ಆಸ್ತಿ ಹೊಣೆಗಾರಿಕೆ ನಿರ್ವಹಣಾ ಸಮಿತಿ ಸಭೆಯು ರೆಪೊ ದರ ಕಡಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು ಅನುಮತಿ ನೀಡಿದೆ. ಹಾಗಾಗಿ, ಬಡ್ಡಿದರವನ್ನು ಶೇ 9.10ರಿಂದ ಶೇ 8.85ಕ್ಕೆ ತಗ್ಗಿಸಲಾಗಿದೆ. ಶನಿವಾರದಿಂದಲೇ ಪರಿಷ್ಕೃತ ಆದೇಶ ಜಾರಿಗೆ ಬಂದಿದೆ ಎಂದು ಬ್ಯಾಂಕ್‌ ತಿಳಿಸಿದೆ.

ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ರೆಪೊ ದರ ಕಡಿತಗೊಳಿಸಿದ ಬೆನ್ನಲ್ಲೇ ಐಒಬಿ ಈ ಕ್ರಮಕೈಗೊಂಡಿದೆ. ಈಗಾಗಲೇ, ಹಲವು ಬ್ಯಾಂಕ್‌ಗಳು ಬಡ್ಡಿದರ ಇಳಿಕೆ ಮಾಡಿ ಗ್ರಾಹಕರಿಗೆ ಅನುಕೂಲ ಕಲ್ಪಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.