ADVERTISEMENT

ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 10 ಪೈಸೆ ಏರಿಕೆ

ಪಿಟಿಐ
Published 28 ಆಗಸ್ಟ್ 2025, 5:44 IST
Last Updated 28 ಆಗಸ್ಟ್ 2025, 5:44 IST
<div class="paragraphs"><p> ರೂಪಾಯಿ ಮೌಲ್ಯ ಏರಿಕೆ</p></div>

ರೂಪಾಯಿ ಮೌಲ್ಯ ಏರಿಕೆ

   

Credit: iStock Photo

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಗುರುವಾರ ಆರಂಭಿಕ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 10 ಪೈಸೆ ಏರಿಕೆಯಾಗಿದೆ. ಪ್ರತೀ ಡಾಲರ್ ಎದುರು ರೂಪಾಯಿ ಬೆಲೆ ₹87.59ರಷ್ಟಿದೆ.

ADVERTISEMENT

ಜಾಗತಿಕ ಮಾರುಕಟ್ಟೆಯಲ್ಲಿ ಅಮೆರಿಕ ಡಾಲರ್ ಮೌಲ್ಯ ಮತ್ತು ಕಚ್ಚಾ ತೈಲ ದರ ಕಡಿಮೆಯಾಗಿರುವುದು ಸೇರಿದಂತೆ ದೇಶದ ಷೇರುಪೇಟೆ ಸೂಚ್ಯಂಕಗಳ ಏರಿಕೆಯೂ ರೂಪಾಯಿ ಮೌಲ್ಯ ಹೆಚ್ಚಳವಾಗಲು ನೆರವಾಯಿತು ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಮಂಗಳವಾರ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಮಂಗಳವಾರ 13 ಪೈಸೆ ಕುಸಿತ ಕಂಡು ₹87.69ಕ್ಕೆ ಮುಕ್ತಾಯಗೊಂಡಿತ್ತು. ವಿದೇಶಿ ಬಂಡವಾಳದ ನಿರಂತರ ಹೊರಹರಿವು ಮತ್ತು ಅಮೆರಿಕದ ವ್ಯಾಪಾರ ಸುಂಕದ ಅನಿಶ್ಚಿತತೆಯು ಹೂಡಿಕೆದಾರರ ಮೇಲೆ ಪರಿಣಾಮ ಬೀರಿದೆ. ಇದು ರೂಪಾಯಿ ಮೌಲ್ಯ ಇಳಿಕೆಗೆ ಕಾರಣವಾಗಿತ್ತು ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದರು.

ಗಣೇಶ ಚತುರ್ಥಿ ಪ್ರಯುಕ್ತ ಬುಧವಾರ ದೇಶಿಯ ಷೇರುಪೇಟೆ ಮತ್ತು ವಿದೇಶಿ ವಿನಿಮಯ ಮಾರುಕಟ್ಟೆಗಳು ಮುಚ್ಚಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.