ರೂಪಾಯಿ ಮೌಲ್ಯ ಏರಿಕೆ
Credit: iStock Photo
ಮುಂಬೈ/ನವದೆಹಲಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 25 ಪೈಸೆ ಏರಿಕೆಯಾಗಿದೆ. ರೂಪಾಯಿ ಮೌಲ್ಯವು ಡಾಲರ್ ಎದುರು ₹87.84ರಷ್ಟಿದೆ.
ದೇಶೀಯ ಷೇರುಪೇಟೆಯಲ್ಲಿನ ಸಕಾರಾತ್ಮಕ ವಹಿವಾಟು ಮತ್ತು ಭಾರತ ಹಾಗೂ ಅಮೆರಿಕ ನಡುವೆ ವ್ಯಾಪಾರ ಮಾತುಕತೆ ಶೀಘ್ರ ನಡೆಯುವ ನಿರೀಕ್ಷೆಯು ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆಗೆ ನೆರವಾಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಅಮೆರಿಕ ಡಾಲರ್ ಮೌಲ್ಯ ಮತ್ತು ಕಚ್ಚಾ ತೈಲ ದರ ಕಡಿಮೆಯಾಗಿರುವುದು ಸೇರಿದಂತೆ ದೇಶದ ಷೇರುಪೇಟೆ ಸೂಚ್ಯಂಕಗಳ ಏರಿಕೆಯೂ ರೂಪಾಯಿ ಮೌಲ್ಯ ಹೆಚ್ಚಳವಾಗಲು ನೆರವಾಯಿತು ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಷೇರು ಸೂಚ್ಯಂಕ ಏರಿಕೆ: ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 313 ಅಂಶ ಹೆಚ್ಚಳವಾಗಿ, 82,693ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 91 ಅಂಶ ಏರಿಕೆಯಾಗಿ, 25,330ಕ್ಕೆ ಕೊನೆಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.