ADVERTISEMENT

ದಶಕದ ಅವಧಿಯಲ್ಲಿ ₹ 1 ಲಕ್ಷ ಕೋಟಿ ಮೌಲ್ಯದ ಉದ್ಯಮವಾಗಿ ಒಟಿಟಿ- ವರದಿ

ಪಿಟಿಐ
Published 2 ಜನವರಿ 2022, 16:00 IST
Last Updated 2 ಜನವರಿ 2022, 16:00 IST

ನವದೆಹಲಿ: ದೇಶದ ಒಟಿಟಿ ಉದ್ಯಮವು ಒಂದು ದಶಕದ ಅವಧಿಯಲ್ಲಿ ₹ 1 ಲಕ್ಷ ಕೋಟಿ ಮೌಲ್ಯದ ಉದ್ಯಮವಾಗಿ ಬೆಳೆಯುವ ನಿರೀಕ್ಷೆ ಇದೆ ಎಂದು ಭಾರತೀಯ ಕೈಗಾರಿಕಾ ಮಹಾಸಂಘ (ಸಿಐಐ) ಮತ್ತು ಬಾಸ್ಟನ್ ಕನ್ಸಲ್ಟಿಂಗ್ ಗ್ರೂಪ್ (ಬಿಸಿಜಿ) ಜಂಟಿಯಾಗಿ ಸಿದ್ಧಪಡಿಸಿರುವ ವರದಿಯೊಂದು ಹೇಳಿದೆ.

ಈ ಉದ್ಯಮವು ನಿರಂತರವಾಗಿ ಬೆಳವಣಿಗೆ ಕಾಣುತ್ತಿದೆ. ಪ್ರವರ್ಧಮಾನಕ್ಕೆ ಬರುತ್ತಿರುವ ಮಾರುಕಟ್ಟೆಗಳ ಪೈಕಿ ಈ ಉದ್ಯಮವು ಭಾರತದಲ್ಲಿ ಅತ್ಯಂತ ಸ್ಪರ್ಧಾತ್ಮಕವಾಗಿದೆ. ನಲವತ್ತಕ್ಕೂ ಹೆಚ್ಚಿನ ಕಂಪನಿಗಳು ದೇಶದಲ್ಲಿ ಈ ಉದ್ಯಮದಲ್ಲಿ ಇವೆ ಎಂದು ವರದಿಯು ಹೇಳಿದೆ.

ಭಾರತದಲ್ಲಿ ಒಟಿಟಿ ಕಂಪನಿಗಳು ಪ್ರಾದೇಶಿಕ ಕಾರ್ಯಕ್ರಮಗಳನ್ನು ನಿರ್ಮಾಣ ಮಾಡಲು ಹೆಚ್ಚಿನ ಹೂಡಿಕೆ ಮಾಡುತ್ತಿವೆ ಎಂದು ವರದಿ ಉಲ್ಲೇಖಿಸಿದೆ. ನೆಟ್‌ಫ್ಲಿಕ್ಸ್‌, ಅಮೆಜಾನ್ ಪ್ರೈಮ್, ಸೋನಿ ಲೈವ್, ಆಲ್ಟ್ ಬಾಲಾಜಿ, ಜೀ5, ಎರೋಸ್ ನೌ ಮತ್ತು ಡಿಸ್ನಿ ಹಾಟ್‌ಸ್ಟಾರ್ ಪ್ಲಸ್ ದೇಶದ ಒಟಿಟಿ ಮಾರುಕಟ್ಟೆಯಲ್ಲಿರುವ ಪ್ರಮುಖ ಕಂಪನಿಗಳು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.