ADVERTISEMENT

ಅದಾನಿ ಕಂಪನಿಗಳ ಬಂಡವಾಳ ಸಂಗ್ರಹಕ್ಕೆ ಒಪ್ಪಿಗೆ

ರಾಯಿಟರ್ಸ್‌
Published 13 ಮೇ 2023, 19:33 IST
Last Updated 13 ಮೇ 2023, 19:33 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಷೇರುಪೇಟೆಯಿಂದ ಬಂಡವಾಳ ಸಂಗ್ರಹಿಸಲು ಅದಾನಿ ಎಂಟರ್‌ಪ್ರೈಸಸ್‌ ಮತ್ತು ಅದಾನಿ ಟ್ರಾನ್ಸ್‌ಮಿಷನ್‌ ಕಂಪನಿಗಳ ಆಡಳಿತ ಮಂಡಳಿಗಳು ಶನಿವಾರ ಒಪ್ಪಿಗೆ ನೀಡಿವೆ.

ಅರ್ಹ ಸಾಂಸ್ಥಿಕ ಹೂಡಿಕೆ ಅಥವಾ ಇತರೆ ಮಾರ್ಗಗಳ ಮೂಲಕ ಈಕ್ಟಿಟಿ ಷೇರುಗಳನ್ನು ಮಾರಾಟ ಮಾಡಿ ₹8,500ಯವರೆಗೆ  ಬಂಡವಾಳ ಸಂಗ್ರಹಿಸಲಾಗುವುದು ಎಂದು ಅದಾನಿ ಟ್ರಾನ್ಸ್‌ಮಿಷನ್‌ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಅದಾನಿ ಎಂಟರ್‌ಪ್ರೈಸಸ್‌ ಕಂಪನಿಯು ₹12,500 ಕೋಟಿ ಬಂಡವಾಳ ಸಂಗ್ರಹಿಸುವ ಯೋಜನೆ ಹೊಂದಿದೆ. ಅರ್ಹ ಸಾಂಸ್ಥಿಕ ಹೂಡಿಕೆ ಅಥವಾ ಇತರ ಮಾರ್ಗಗಳ ಮೂಲಕ ಬಂಡವಾಳ ಸಂಗ್ರಹಿಸಲಾಗುವುದು ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ADVERTISEMENT

ಮೂಲಗಳ ಪ್ರಕಾರ, ಯುರೋಪ್‌ ಮತ್ತು ಮಧ್ಯ ಪ್ರಾಚ್ಯ ಭಾಗದ ಹೂಡಿಕೆದಾರರು ಷೇರುಗಳನ್ನು ಖರೀದಿಸಲು ಹೆಚ್ಚಿನ ಆಸಕ್ತಿ ವ್ಯಕ್ತಪಡಿಸಿದ್ದಾರೆ.

ಬಂಡವಾಳ ಸಂಗ್ರಹಿಸುವ ಯೋಜನೆಗೆ ಒಪ್ಪಿಗೆ ಪಡೆಯುವ ಸಂಬಂಧ ಶನಿವಾರ ನಡೆಯಬೇಕಿದ್ದ ಅದಾನಿ ಗ್ರೀನ್‌ ಕಂಪನಿಯ ಆಡಳಿತ ಮಂಡಳಿ ಸಭೆಯನ್ನು ಮೇ 24ಕ್ಕೆ ಮುಂದೂಡಲಾಗಿದೆ.

ಅಮೆರಿಕದ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್‌ ವರದಿ ಪ್ರಕಟವಾದ ಬಳಿಕ ಹೂಡಿಕೆದಾರರ ವಿಶ್ವಾಸ ಕಡಿಮೆ ಆಗಿದ್ದು, ಸಮೂಹದ ಕಂಪನಿಗಳ ಷೇರು ಮೌಲ್ಯವೂ ಕುಸಿದಿತ್ತು. ಅದಾದ ‌ಕೆಲವೇ ತಿಂಗಳುಗಳ ಬಳಿಕ ಅದಾನಿ ಸಮೂಹದ ಕಂಪನಿಗಳು ಬಂಡವಾಳ ಸಂಗ್ರಹಿಸಲು ಮುಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.