
ಪಿಟಿಐ
ಮುಂಬೈ: ಫೆಬ್ರುವರಿ 13ಕ್ಕೆ ಕೊನೆಗೊಂಡ ವಾರದಲ್ಲಿ ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹದಲ್ಲಿ ₹78,596 ಕೋಟಿಯಷ್ಟು ಹೆಚ್ಚಳವಾಗಿದೆ.
ಒಟ್ಟು ಮೀಸಲು ಸಂಗ್ರಹವು ₹65.84 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತಿಳಿಸಿದೆ.
ವಿದೇಶಿ ಕರೆನ್ಸಿಗಳ ಸಂಪತ್ತಿನ ಮೌಲ್ಯ ₹32,208 ಕೋಟಿಯಷ್ಟು ಹೆಚ್ಚಳವಾಗಿದ್ದು, ₹52 ಲಕ್ಷ ಕೋಟಿಯಾಗಿದೆ. ಚಿನ್ನದ ಮೀಸಲು ಸಂಗ್ರಹದಲ್ಲಿ ₹45,272 ಕೋಟಿ ಏರಿಕೆಯಾಗಿದ್ದು, ₹11.65 ಲಕ್ಷ ಕೋಟಿಯಾಗಿದೆ. ಸ್ಪೆಷಲ್ ಡ್ರಾಯಿಂಗ್ ರೈಟ್ಸ್ (ಎಸ್‌ಡಿಆರ್) ₹1.71 ಲಕ್ಷ ಕೋಟಿ ಆಗಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿ ಭಾರತದ ಪಾಲು ₹42,950 ಕೋಟಿಯಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.