ADVERTISEMENT

ಆರ್ಥಿಕ ವೃದ್ಧಿ ದರ ಶೇ 6: ‘ಫಿಕ್ಕಿ’ ಸಮೀಕ್ಷೆ

ಪಿಟಿಐ
Published 26 ಆಗಸ್ಟ್ 2019, 20:15 IST
Last Updated 26 ಆಗಸ್ಟ್ 2019, 20:15 IST
   

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ದೇಶಿ ಆರ್ಥಿಕ ವೃದ್ಧಿ ದರವು ಶೇ 6ರಷ್ಟು ಇರಲಿದೆ ಎಂದು ಭಾರತೀಯ ವಾಣಿಜ್ಯೋದ್ಯಮ ಸಂಘಗಳ ಒಕ್ಕೂಟದ (ಫಿಕ್ಕಿ) ಸಮೀಕ್ಷೆ ತಿಳಿಸಿದೆ.

2018–19ರಲ್ಲಿನ ಇದೇ ಅವಧಿಯಲ್ಲಿನ (ಏಪ್ರಿಲ್‌– ಜೂನ್‌) ವೃದ್ಧಿ ದರವು ಶೇ 8.2ರಷ್ಟು ದಾಖಲಾಗಿತ್ತು. ಈ ವರ್ಷದ ಜೂನ್‌ 30ಕ್ಕೆ ಕೊನೆಗೊಂಡ ತ್ರೈಮಾಸಿಕ ಅವಧಿಯಲ್ಲಿನ ವೃದ್ಧಿ ದರದ ವಿವರಗಳನ್ನು ಕೇಂದ್ರೀಯ ಸಾಂಖ್ಯಿಕ ಕಚೇರಿಯು ಮುಂದಿನ ವಾರ ಪ್ರಕಟಿಸುವ ನಿರೀಕ್ಷೆ ಇದೆ.

ನ್ಯಾಷನಲ್‌ ಸ್ಯಾಂಪಲ್‌ ಸರ್ವೆ ಆಫೀಸ್‌ (ಎನ್‌ಎಸ್‌ಎಸ್‌ಒ) ಇತ್ತೀಚಿಗೆ ಪ್ರಕಟಿಸಿದ್ದ ನಿರುದ್ಯೋಗದ ಸಂಖ್ಯೆಯು, ದೇಶದಲ್ಲಿನ ಉದ್ಯೋಗ ಅವಕಾಶಗಳ ಬಗ್ಗೆ ನಿರಾಶಾದಾಯಕ ಚಿತ್ರಣ ನೀಡುತ್ತದೆ ಎಂದು ‘ಫಿಕ್ಕಿ’ಯ ಆರ್ಥಿಕ ಮುನ್ನೋಟ ಸಮೀಕ್ಷೆ ಅಭಿಪ್ರಾಯಪಟ್ಟಿದೆ.

ADVERTISEMENT

ಭಾರತೀಯ ರಿಸರ್ವ್‌ ಬ್ಯಾಂಕ್‌ ತನ್ನ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿಮೆ ಮಾಡುವ ಧೋರಣೆಯನ್ನು ಈ ಹಣಕಾಸು ವರ್ಷದ
ಉದ್ದಕ್ಕೂ ಮುಂದುವರೆಸಿಕೊಂಡು ಹೋಗಬೇಕು ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಬಹುತೇಕ ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.