ಪೀಯೂಷ್ ಗೋಯಲ್
ಸ್ಟಾಕ್‌ಹೋಮ್: ‘2025–26ರ ಆರ್ಥಿಕ ವರ್ಷದಲ್ಲಿ ದೇಶದ ಸರಕು ಮತ್ತು ಸೇವೆಗಳ ರಫ್ತು ಮೌಲ್ಯ ₹77.48 ಲಕ್ಷ ಕೋಟಿ (900 ಬಿಲಿಯನ್ ಡಾಲರ್) ದಾಟುವ ನಿರೀಕ್ಷೆ ಇದೆ’ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ.
ರಷ್ಯಾ–ಉಕ್ರೇನ್ ಸಂಘರ್ಷ, ಇಸ್ರೇಲ್–ಹಮಾಸ್ ಯುದ್ಧ ಮತ್ತು ಕೆಂಪು ಸಮುದ್ರದ ಬಿಕ್ಕಟ್ಟಿನ ನಡುವೆಯೂ ದೇಶದ ರಫ್ತು ಮೌಲ್ಯ 2024–25ರ ಆರ್ಥಿಕ ವರ್ಷದಲ್ಲಿ ₹71 ಲಕ್ಷ ಕೋಟಿಯಷ್ಟಾಗಿತ್ತು. ಇದು ಸಾರ್ವಕಾಲಿಕ ಗರಿಷ್ಠ ಮಟ್ಟವಾಗಿತ್ತು ಎಂದು ಹೇಳಿದ್ದಾರೆ.
ಜಾಗತಿಕ ಆರ್ಥಿಕ ಅನಿಶ್ಚಿತ ಸ್ಥಿತಿಯ ನಡುವೆಯೂ ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ರಫ್ತು ಮೌಲ್ಯ ₹77 ಲಕ್ಷ ಕೋಟಿ ದಾಟುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
2025–26ನೇ ಆರ್ಥಿಕ ವರ್ಷದಲ್ಲಿ ದೇಶದ ಸರಕು ಮತ್ತು ಸೇವೆಗಳ ಒಟ್ಟು ರಫ್ತು ಮೌಲ್ಯವು 1 ಟ್ರಿಲಿಯನ್ ಡಾಲರ್‌ಗೆ (₹85 ಲಕ್ಷ ಕೋಟಿ) ತಲುಪುವ ನಿರೀಕ್ಷೆಯಿದೆ ಎಂದು ಭಾರತೀಯ ರಫ್ತುದಾರರ ಸಂಘಟನೆಗಳ ಒಕ್ಕೂಟ (ಎಫ್‌ಐಇಒ) ಇತ್ತೀಚೆಗೆ ಹೇಳಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.